6:09 AM Tuesday7 - January 2025
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ… ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ…

ಇತ್ತೀಚಿನ ಸುದ್ದಿ

ಸಿರಿಧಾನ್ಯ ಎಂಎಸ್ ಪಿ ವ್ಯಾಪ್ತಿಗೆ ತನ್ನಿ; ಕೆಂದ್ರ ಸರಕಾರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಮನವಿ

05/01/2025, 09:38

ಬೆಂಗಳೂರು(reporterkarnataka.com): ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ಸಿಂಗ್‌ ಚೌವ್ಹಾಣ್‌ ಅವರು ದೇಶದ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಅವರು ಮಾತನಾಡಿ ಕರ್ನಾಟಕದ ಪರವಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟರು.
ರಾಜ್ಯದಲ್ಲಿ ಸರ್ಕಾರಿ ಬೀಜೋತ್ಪಾದನಾ ಕೇಂದ್ರಗಳು ಮತ್ತು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯಗಳನ್ನು ಬಲಪಡಿಸಲು ಹೊಸ ಯೋಜನೆಗಳನ್ನು ರೂಪಿಸಿ ನೆರವು ನೀಡುವಂತೆ ಚಲುವರಾಯಸ್ವಾಮಿರವರು ಮನವಿ ಮಾಡಿದರು.
ಜೋಳ(ಮಾಲ್ದಂಡಿ)ಕ್ಕೆ ಹಿಂಗಾರು ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವಂತೆಯೂ ಸಹ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ರಾಜ್ಯದ ಕೃಷಿ ಹಾಗೂ ವಿವಿಧ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿರವರು ಕೋರಿದರು. 
ಇದೇ ವೇಳೆ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18ರಿಂದ 5ಕ್ಕೆ ಇಳಿಸುವಂತೆ ಅವರು ಕೋರಿದರು.
ಬೆಂಗಳೂರು ಜಿಲ್ಲೆಯ ಆನೇಕಲ್‌ನಲ್ಲಿರುವ ಸರ್ಕಾರಿ ಭೂಮಿಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಪೆಸ್ಟಿಸೈಡ್ ಫಾರ್ಮುಲೇಶನ್ ಟೆಕ್ನಾಲಜಿಯ ಸ್ಥಾಪನೆಗೂ ಧನಸಹಾಯ ಒದಗಿಸುವಂತೆ ರಾಜ್ಯ ಕೃಷಿ ಸಚಿವರು ಮನವಿ ಮಾಡಿದರು.
ಕೃಷಿ ವಿಶ್ವವಿದ್ಯಾಲಯಗಳ ಕ್ಷೇತ್ರ ಬೆಳೆಗಳ ವಿಶೇಷವಾಗಿ ಎಣ್ಣೆಕಾಳು ಬೆಳೆಗಳ ತಳಿವರ್ಧೆನೆಗೆ ಕೇಂದ್ರೀಯ ಕೃಷಿ ಸಂಶೋಧನೆ ಹಾಗೂ ವಿಸ್ತರಣೆ ಇಲಾಖೆ (DARE) ಮೂಲಕ ಹೆಚ್ಚಿನ ಹಣವನ್ನು ಮಂಜೂರು ಮಾಡಲು ಕೇಂದ್ರ ಸಚಿವರಿಗೆ ವಿನಂತಿಸಿದರು.
ರಾಜ್ಯದಲ್ಲಿ ಸವಳು ಮತ್ತು ಜವಳು ಮಣ್ಣು ಸುಧಾರಣೆಗೆ ಹೊಸ ಯೋಜನೆಯನ್ನು ಪ್ರಾರಂಭಿಸಬಹುದಾಗಿದೆ ಎಂದು ಕೇಂದ್ರ ಸಚಿವರ ಗಮನ ಸೆಳೆದ ಎನ್‌.ಚಲುವರಾಯಸ್ವಾಮಿ ರೈತರ ಹೊಲಗಳಲ್ಲಿ ಕೃಷಿ ಅರಣ್ಯೀಕರಣ ಪ್ರದೇಶ ವಿಸ್ತರಣೆಗೆ ಧನಸಹಾಯ ಹೆಚ್ಚಿಸಲು ಕೋರಿದರು.


ಕರ್ನಾಟಕದಲ್ಲಿ ಕ್ಲಸ್ಟರ್ ಆಧಾರದ ಮೇಲೆ ರೈತ ಉತ್ಪಾದಕ ಸಂಸ್ಥೆಗಳು ಮತ್ತು ಅಗ್ರಿ-ಟೆಕ್ ಸ್ಟಾರ್ಟ್ಅಪ್‌ಗಳ ಮೂಲಕ ಕೋಲ್ಡ್ ಚೈನ್ ಅಭಿವೃದ್ಧಿ ಮಾಡಿ ಸಂಸ್ಕರಣೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಮಾರ್ಕೆಟಿಂಗ್, ರಫ್ತು ಮುಂತಾದ ತಂತ್ರಜ್ಞಾನಗಳನ್ನು ಉತ್ತೇಜಿಸಲು ಯೋಜನೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿದರು.
ಇದೇ ವೇಳೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ಸಿಂಗ್‌ ಚೌವ್ಹಾಣ್‌, ಕೃಷಿ ರಾಜ್ಯ ಸಚಿವರು ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಸಾವಯವ, ಸಿರಿಧಾನ್ಯ ವಾಣಿಜ್ಯ ಮೇಳ-2025ಕ್ಕೆ ಆಗಮಿಸುವಂತೆ ಎನ್.ಚಲುವರಾಯಸ್ವಾಮಿರವರು ಅಹ್ವಾನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು