7:32 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 53 ಲಕ್ಷ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

07/10/2025, 20:18

ಮಂಗಳೂರು(reporterkarnataka.com): ರಾಜ್ಯದಲ್ಲಿ 2 ಕೋಟಿ ಅಸಂಘಟಿತ ಕಾರ್ಮಿಕರುಗಳಿದ್ದು, 53 ಲಕ್ಷ ಸಂಘಟಿತ ಕಾರ್ಮಿಕರುಗಳಿದ್ದು, ಸಂಘಟಿತ ಕಾರ್ಮಿಕರಿಗೆ ಈಗಾಗಲೇ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ಹೇಳಿದರು.

ಅವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ರಾಜ್ಯದಲ್ಲಿ ನೊಂದಾಯಿಸಿಕೊಂಡಂತಹ 18 ರಿಂದ 60 ವರ್ಷದವರಿಗೆಲ್ಲರಿಗೂ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು. ಇಲ್ಲಿಯ ತನಕ ಕಾರ್ಮಿಕ ವೇತನ ಬೋರ್ಡ್‌ಗೆ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುತ್ತಿತ್ತು. ಆದರೆ ಈಗ ಮೊದಲ ಬಾರಿಗೆ ರಾಜಕೀಯ ವ್ಯಕ್ತಿಯನ್ನು ಹಾಗೂ ಸಾಮಾಜಿಕ ವಲಯದಲ್ಲಿ ತೊಡಗಿಸಿಕೊಂಡಿದ್ದು, ಅಧ್ಯಕ್ಷರು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಈಗಾಗಲೇ ಕನಿಷ್ಠ ವೇತನವನ್ನು ನಗರ-ಗ್ರಾಮೀಣ ಪ್ರದೇಶದ ಆದಾರದಲ್ಲಿ ೧೪ ರಿಂದ ೧೯ ಸಾವಿರ ರೂ. ವರೆಗೆ ಅನುಮೋದನೆಗೊಂಡಿದ್ದು, ಮುಂದಿನ ದಿನದಲ್ಲಿ ಜನರ ಜೀವನ ವೆಚ್ಚದ ಆದಾರವಾಗಿಟ್ಟುಕೊಂಡು ಕನಿಷ್ಠ ವೇತನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
ಕನಿಷ್ಠ ವೇತನ ಸಲಹಾ ಮಂಡಳಿಯು ರಾಜ್ಯದೆಲ್ಲೆಡೆ ಕಾರ್ಮಿಕರನ್ನು ಭೇಟಿ ಮಾಟಿ ಮಾಡಿ ಅವರಿಂದ ಬಂದ ಮನವಿ-ಸಲಹೆ ಪತ್ರಗಳನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು ಎಂದ ಅವರು ಕರಾವಳಿಯಲ್ಲಿ ಬೀಡಿ ಕಾರ್ಮಿಕರು ಹೆಚ್ಚಾಗಿದ್ದು, ಅವರ ಸಮಸ್ಯೆಯನ್ನು ಅದ್ಯಾಯನ ಮಾಡಿ ಪರಿಹರಿಸಲಾಗುವುದು ಎಂದು ಹೇಳಿದರು.
ಪ್ರಮುಖರಾದ ವಿಶ್ವಾಸ್ ದಾಸ್, ಸದಾನಂದ ಪಾವಂಜೆ, ಮುಸ್ತಾಫ, ಶುಭೋದಯ ಆಳ್ವ, ಜಯಶೀಲ ಅಡ್ಯಾಂತಾಯ, ಲಾರೆನ್ಸ್ ಡಿಸೋಜಾ, ನಿತ್ಯಾಧರ ಶೆಟ್ಟಿ ಉಪಸ್ಥಿತರಿದ್ದರು.

*ಅ.10ಕ್ಕೆ ಕಾರ್ಮಿಕ ಸಚಿವರು ಜಿಲ್ಲೆಗೆ*

ಅ.೧೦ ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಭೇಟಿ ನೀಡಲಿದ್ದು, ಅವರು ಜಿಲ್ಲೆಯ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು