10:12 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಸ್ಮೃತಿ ಇರಾನಿ ಕಾಸರಗೋಡು ಭೇಟಿ: ಕಾಞಂಗಾಡ್‌ನಲ್ಲಿ ಸಾರ್ವಜನಿಕ ಸಭೆ, ವಯನಾಡಿನಲ್ಲಿ ರೋಡ್ ಶೋ; ಮಂಗಳೂರು ಏರ್ ಪೋರ್ಟ್ ನಿಂದ ಬೆಂಗಳೂರಿಗೆ

05/04/2024, 18:31

ಕಾಸರಗೋಡು(reporterkarnataka.com): ಜನರನ್ನು ಲೂಟಿ ಮಾಡಲು I.N.D.I.A ಮೈತ್ರಿಕೂಟ ರಚಿಸಲಾಗಿದೆ. ಕಾಂಗ್ರೆಸ್ ಪಕ್ಷವು ಎಸ್‌ಡಿಪಿಐ, ರಾಜಕೀಯ ಘಟಕದ ಬೆಂಬಲವಿಲ್ಲದೆ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಲಿ ಎಂದು ಕೇಂದ್ರ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸ್ಮೃತಿ ಇರಾನಿ ಸವಾಲು ಹಾಕಿದರು. ಕೇರಳದ ಕಾಸರಗೋಡಿಗೆ ಭೇಟಿ ನೀಡಿದ ಅವರು ಎನ್‌ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಅವರನ್ನು ಬೆಂಬಲಿಸಿ ಕಾಞಂಗಾಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ರಾಜ್ಯದಲ್ಲಿ ಕಾಂಗ್ರೆಸ್, ಸಿಪಿಎಂ ಮತ್ತು ಸಿಪಿಐನ ಸ್ಥಳೀಯ ನಾಯಕರು ಹಲವಾರು ಕೋಟಿ ಸಾರ್ವಜನಿಕ ಹಣವನ್ನು ಕಬಳಿಸಿದ ಸಹಕಾರಿ ಬ್ಯಾಂಕ್ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿದರು.
ನರೇಂದ್ರ ಮೋದಿ ಅವರ ಸರ್ಕಾರವು ದೇಶದ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅದನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಅವರು ನುಡಿದರು.
ಇದಕ್ಕೆ ಮುನ್ನ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ಕಾಸರಗೋಡಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಂಗಳೂರು ನಗರಕ್ಕೆ ಆಗಮಿಸಿದೇ ನೇರವಾಗಿ ಬೆಂಗಳೂರಿಗೆ ತೆರಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು