11:53 PM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಸ್ನೇಹಿತರ ಜತೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು: ರಜೆ ಸವಿಯುವ ವೇಳೆ ದುರಂತ

28/03/2024, 14:16

*ನೀರಾವರಿ ಇಲಾಖೆ ಅಧಿಕಾರಿಗಳೇ ಕೆರೆ, ಕಟ್ಟೆ, ನದಿ ಪಾತ್ರಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ನಾಮಫಲಕ ಅಳವಡಿಸಿ ಯುವಕರ ಜೀವ ರಕ್ಷಿಸಿ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಳಿ ಇರುವ ಹುಲ್ಲಹಳ್ಳಿ ಅಣೆಕಟ್ಟೆಯಲ್ಲಿ ನಡೆದಿದೆ.
ನಂಜನಗೂಡಿನ ಎಂಐಟಿ ಕಾಲೇಜು ವಿಧ್ಯಾರ್ಥಿ ಅಭಿಷೇಕ್(23) ಮೃತ ದುರ್ದೈವಿ. ಕಾಲೇಜು ರಜೆ ಇದ್ದ ಕಾರಣ ಅಭಿಷೇಕ್ ತನ್ನ ಸ್ನೇಹಿತರಾದ ಸಮರ್ಥ್ ಹಾಗೂ ಪ್ರೀತಂ ಜೊತೆ ಹುಲ್ಲಹಳ್ಳಿಯ ಸಮೀಪವಿರುವ ಅಣೆ ಕಟ್ಟೆಯಲ್ಲಿ ಈಜಲು ತೆರಳಿದ್ದಾನೆ.
ಸ್ನೇಹಿತರ ಜೊತೆಗೆ ನೀರಿಗೆ ಧುಮುಕಿ ಈಜುತ್ತಾ ಮುಂದೆ ಸಾಗಿದ ಅಭಿಷೇಕ್ ಹಿಂದಕ್ಕೆ ಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹುಲ್ಲಹಳ್ಳಿ ಪೊಲೀಸರ ನೆರವಿನಿಂದ ಅಭಿಷೇಕ್ ಮೃತದೇಹ ಹೊರತೆಗೆಯಲಾಗಿದೆ.ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


15 ದಿನಗಳ ಹಿಂದೆ ಇದೇ ಸ್ಥಳದಲ್ಲಿ ಮೈಸೂರಿನ ಯುವಕ ಸ್ನೇಹಿತರ ಜೊತೆ ಈಜಲು ತೆರಳಿ ನೀರುಪಾಲಾಗಿದ್ದ. ನಂತರ ಎರಡು ದಿನಗಳ ಹಿಂದೆ ನಂಜನಗೂಡಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯಲ್ಲಿ ಈಜಲು ಮೂವರು ಹೊರ ರಾಜ್ಯದ ಕಾರ್ಮಿಕರು ಮುಳುಗಿ ಸಾವನ್ನಪ್ಪಿದ್ದರು.ಈ ಘಟನೆ ಮಾಸುವ ಮುನ್ನವೇ ಈ ಸ್ಥಳದಲ್ಲಿ ಮತ್ತೊಂದು ದುರಂತ ನಡೆದಿದೆ.
ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ನದಿ ಪಾತ್ರದಲ್ಲಿ ಹಾಗೂ ಕೆರೆಕಟ್ಟೆಗಳ ಬಳಿ ಮುನ್ನೆಚ್ಚರಿಕೆ ಫಲಕಗಳನ್ನ ಅಳವಡಿಸಿ ಯುವಕರ ಜೀವ ಬದುಕಿಸಲು ಮುಂದಾಗ ಬೇಕಿದೆ.
ಘಟನಾ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್, ದೊಡ್ಡಯ್ಯ, ರಸುಲ್ ಸಾಗವಾಲೆ, ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು