12:17 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶೋಭಾ ಕರಂದ್ಲಾಜೆಯ ಹುಡುಕಿ ಸೆಲ್ಪಿ ತೆಗೆದು ಕಳುಹಿಸಿದರೆ ಬಹುಮಾನ:  ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ

28/09/2022, 14:12

ಉಡುಪಿ(reporterkarnataka.com): ಒಂದು ವಾರದಲ್ಲಿ ಉಡುಪಿ, ಕಾಪು ಅಥವಾ ಬ್ರಹ್ಮಾವರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಾರಿಗಾದರೂ ಸಿಕ್ಕರೆ ಅವರ ಜತೆ ಫೋಟೋ ತೆಗೆದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿದರೆ, ಮೊದಲ 5 ಮಂದಿ

ವಿಜೇತರಿಗೆ 5000 ರೂಪಾಯಿ ಬಹುಮಾನ ನೀಡಲಾಗುವುದು ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸವಾಲು ಹಾಕಿದ್ದಾರೆ.

ಮಲ್ಪೆ ಕರಾವಳಿ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಉಡುಪಿ

ಕಲ್ಮಾಡಿ ಚರ್ಚ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ವೇಳೆ ಅವರು ಮಾತನಾಡಿದರು.

ಕರಾವಳಿ ಬೈಪಾಸ್ ವರೆಗೆ ಪಾದಯಾತ್ರೆ ನಡೆಯಿತು.

ಜಿಲ್ಲೆಯಲ್ಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಯಾವುದೇ ಕೆಲಸ ಕಾರ್ಯಗಳು ಮಾಡುತ್ತಿಲ್ಲ.

ಎಂದ ಅವರು, ಬಿಜೆಪಿ ಸಂಸದೆ ಉಡುಪಿಗೆ ಬರುವುದೆ ಇಲ್ಲ ಎಂದು ಟೀಕಿಸಿದರು.

ಕರಂದ್ಲಾಜೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ ಎಲ್ಲಾ ಪೊಲೀಸ್ ಠಾಣೆಯಲ್ಲೂ ನಾಪತ್ತೆ ದೂರು ದಾಖಲಿಸಲಾಗುವುದು. ಸಂಸದರನ್ನು ಹುಡುಕಿ ಕೊಡಿ ಎಂಬ ಪೋಸ್ಟರ್ ಅಂಟಿಸಲಾಗುವುದು ಎಂದರು.

ಉಡುಪಿಗೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡಕ್ಕೆ ನಳಿನ್ ಕುಮಾರ್ ಇರುವವರೆಗೆ ಕ್ಷೇತ್ರ ಉದ್ಧಾರ ಆಗಲ್ಲ. ರಾಜ್ಯ ಬಿಜೆಪಿ ಸರಕಾರ ನಿದ್ರೆಯ ಮಂಪರಿ ನಲ್ಲಿದೆ. ಗುತ್ತಿಗೆದಾರರು ರಘುಪತಿ ಭಟ್ ಹಾಗೂ ಶೋಭಾ ಕರಂದ್ಲಾಜೆಗೆ ಶೇ.40 ಕಮಿಷನ್ ಕೊಟ್ಟಿಲ್ಲ ಎಂದು ರಸ್ತೆ ದುರಸ್ತಿಗೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು