3:48 AM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಸೋಲಿಸುವ ತಂತ್ರ: ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸದಂತೆ ವಿಜಯೇಂದ್ರಗೆ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ಮನವಿ

01/04/2023, 09:16

ಮೈಸೂರು(reporterkarnataka.com): 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.
ಕಳೆದ 2018ರ ವಿಧಾನ ಸಭಾ ಚುನಾವಣೆಯಲ್ಲಿ ವಿಜಯೇಂದ್ರ ಅವರನ್ನು ಬಿಜೆಪಿ ಪಕ್ಷದ ವರಿಷ್ಠರು ಯಾವ ರೀತಿ ನಡೆಸಿ ಕೊಂಡಿದ್ದರು ಎಂಬುದನ್ನು ನಾವೆಲ್ಲರೂ ಸೂಕ್ಷ್ಮವಾಗಿ ಗಮನಿಸಿದ್ದೇವೆ. ರಾಜಕೀಯವಾಗಿ ಅತಿ ವೇಗವಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ದೊಡ್ಡ ಮಟ್ಟದ ಯಶಸ್ಸು ಕಂಡು ಬೆಳೆಯುತ್ತಿರುವ ವಿಜಯೇಂದ್ರ ಅವರ ಬೆಳವಾಣಿಗೆಯನ್ನು ಸಹಿಸದ ಕೆಲವರು ವಿಜಯೇಂದ್ರ ಅವರನ್ನು ವರುಣಾದಿಂದ ಚುನಾವಣೆಗೆ ನಿಲ್ಲಿಸಿ ರಾಜಕೀಯವಾಗಿ ಮುಗಿಸುವ ಸಂಚು ರೂಪಿಸಿದ್ದಾರೆ ಎಂಬ ಸಂಶಯ ಉಂಟಾಗುತ್ತಿದೆ.
ವರುಣಾ ವಿಧಾನಸಭಾ ಕ್ಷೇತ್ರ ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿದ್ದು ಸಿದ್ದರಾಮಯ್ಯವಿರುದ್ಧ ಗೆಲುವು ಸಾಧಿಸುವುದು ಅಷ್ಟು ಸುಲುಭವಲ್ಲ. ವಿಜಯೇಂದ್ರ ಅವರು ಮುಂದಿನ ರಾಜಕೀಯ ದೃಷ್ಟಿಯಿಂದ ಶಿಕಾರಿಪುರ ದಿಂದ ಸ್ಪರ್ಧಿಸುವುದು ಉತ್ತಮ ಎಂದು ತೇಜಸ್ವಿ ಅವರು ಮೈಸೂರಿನಲ್ಲಿ ಮನವಿ ಮಾಡಿದ್ದಾರೆ,

ಇತ್ತೀಚಿನ ಸುದ್ದಿ

ಜಾಹೀರಾತು