8:50 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸೋಮೇಶ್ವರ: ಬ್ಯಾಂಕ್ ಆಫ್ ಬರೋಡಾ ವತಿಯಿಂದ ‘ಹಸಿರು ಪರಿಸರದ ಕಡೆ ನಮ್ಮ ನಡೆ’ ಗಿಡ ನೆಡುವ ಕಾರ್ಯಕ್ರಮ

03/01/2024, 11:41

ಮಂಗಳೂರು(reporterkarnataka.com): ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.


ಬ್ಯಾಂಕ್ ಆಫ್ ಬರೋಡಾದ ಪ್ರಧಾನ ವ್ಯವಸ್ಥಾಪಕರು ಹಾಗೂ ವಲಯ ಮುಖ್ಯಸ್ಥರಾದ ಗಾಯತ್ರಿ ಆರ್. ಅವರು ಹಣ್ಣಿನ ಗಿಡಗಳನ್ನು ಹಸ್ತಾಂತರ ಮಾಡಿ, ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಇದುವರೆಗೆ 3000ಕ್ಕೂ ಮಿಕ್ಕಿ ಗಿಡಗಳನ್ನು ಬ್ಯಾಂಕ್ ಆಫ್ ಬರೋಡಾ ವತಿಯಿಂದ ನೆಡಲಾಗಿದೆ.
ಮುಂದಿನ ಪೀಳಿಗೆಗೆ ಪರಿಸರ ರಕ್ಷಣೆ ಮಾಡಲು ಇಂಥ ಕಾರ್ಯಕ್ರಮ ಸಹಕಾರಿ, ಶಾಲಾ ವಿದ್ಯಾರ್ಥಿಗಳು ಹಣ್ಣಿನ ಗಿಡ ಸಂರಕ್ಷಣೆ ಮಾಡಿ ನಮ್ಮ ಮುಂದಿನ ಮಕ್ಕಳಿಗೆ ಹಣ್ಣು, ನೆರಳು ದೊರಕುವಂತೆ ಪರಿಸರ ರಕ್ಷಣೆ ಮಾಡಲು ಕರೆ ನೀಡಿದರು. ಜೊತೆಗೆ ಶಾಲಾ ವಿದ್ಯಾರ್ಥಿಗಳು BOB ಬ್ಯಾಂಕ್ ನಿಂದ BRO ಉಳಿತಾಯ ಖಾತೆ ತೆರೆದು ಮುಂದಿನ ದಿನಗಳಲ್ಲಿ ಶಿಕ್ಷಣ ಸಾಲ ಪಡೆದು ಹೆಚ್ಚಿನ ಪ್ರಗತಿ ಸಾಧಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾದ ಅಧಿಕಾರಿಗಳಾದ ಸತೀಶ್ ಪಾಠಕರ್, ಏಡ್ರಿಚ್ ಅಜಯ್ ಡಿಸೋಜಾ, ಸಂಜಯ್, ಸಚಿನ್ ಹೆಗ್ಡೆ, ಜೀವನ್ ಕೊಲ್ಯ, ಸಾರಸ್ವತ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಮಹೇಶ್ ಎಲ್. ಬೋಂಡಾಲ್, ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಕ್ರಂ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು