1:40 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಸೋಮೇಶ್ವರ ಬೀಚ್ ನೈತಿಕ ಪೊಲೀಸ್ ಗಿರಿ ಪ್ರಕರಣ: 4 ಮಂದಿ ಖಾಕಿ ವಶಕ್ಕೆ

02/06/2023, 16:12

ಮಂಗಳೂರು(reporterkarnataka.com): ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಖಡಕ್ ಸೂಚನೆಯ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿ ನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು, ಈ ಸಂಬಂಧ 4 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನಗರದ ಹೊರವಲಯದ ಉಳ್ಳಾಲ ಸೋಮೇಶ್ವರ ಬೀಚ್ ಗೆ ಬಂದಿದ್ದ ಮಂಗಳೂರಿನ ಖಾಸಗಿ ಅರೆ ವೈದ್ಯಕೀಯ ವಿದ್ಯಾರ್ಥಿ ಗಳ ಮೇಲೆ ಹಲ್ಲೆ ನಡೆಸಲಾಗಿದೆ. ಮೂವರು
ವಿದ್ಯಾರ್ಥಿ ನಿಯ ಜತೆ ಈ ಅನ್ಯಕೋಮಿಗೆ ಸೇರಿದ ವಿದ್ಯಾರ್ಥಿಗಳು ಗುರುವಾರ ಸಂಜೆ ಬೀಚಿಗೆ ಆಗಮಿಸಿದ್ದರು. ಹಲ್ಲೆ ನಡೆಯುತ್ತಿದ್ದಂತೆ ಮೂವರು ವಿದ್ಯಾರ್ಥಿನಿಯರು ಅಲ್ಲಿಂದ ತೆರಳಿದ್ದಾರೆ. ಅವರೆಲ್ಲರು ಕೇರಳದ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಪ್ರಕರಣದ ಕುರಿತಂತೆ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಇದೀಗ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ್ದ ತಂಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಕೂಡ ಇದ್ದ ಎನ್ನುವುದು ಗಮನಾರ್ಹವಾಗಿದೆ. ಘಟನೆಯಲ್ಲಿ ಭಾಗಿ ಆಗಿದ್ದವರನ್ನು ವಶಕ್ಕೆ ಪಡೆಯಲಾಗುತ್ತದೆ, ಇದಕ್ಕಾಗಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು