6:54 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣ: ಬಂಧಿತರ ಸಂಖ್ಯೆ 7ಕ್ಕೆ ಏರಿಕೆ; ಆರೋಪಿಗಳಲ್ಲಿ ಓರ್ವ ಅಪ್ರಾಪ್ತ ಬಾಲಕ!!

02/06/2023, 22:32

ಮಂಗಳೂರು(reporterkarnataka.com): ಉಳ್ಳಾಲದ ಸೋಮೇಶ್ವರ ಬೀಚ್ ಗೆ ವಿದ್ಯಾರ್ಥಿನಿಯರ ಜತೆ ಬಂದ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 7ಕ್ಕೆ ಏರಿದೆ.
ಬಂಧಿತರನ್ನು ಯತೀಶ್, ಸಚಿನ್, ಸುಹಾನ್, ಭವಿಷ್, ಜೀತು, ಅಖಿಲ್ ಮತ್ತು ಓರ್ವ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ಇವರಲ್ಲಿ ಯತೀಶ್, ಸಚಿನ್ ಹಾಗೂ ಸುಹಾನ್ ಪ್ರಮುಖ 3 ಮಂದಿ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ನಗರದ ಹೊರವಲಯದ ಉಳ್ಳಾಲ ಸೋಮೇಶ್ವರ ಬೀಚ್ ಗೆ ಬಂದಿದ್ದ ಮಂಗಳೂರಿನ ಖಾಸಗಿ ಅರೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಮೂವರು
ವಿದ್ಯಾರ್ಥಿನಿಯ ಜತೆ ಈ ಅನ್ಯಕೋಮಿಗೆ ಸೇರಿದ ವಿದ್ಯಾರ್ಥಿಗಳು ಗುರುವಾರ ಸಂಜೆ ಬೀಚಿಗೆ ಆಗಮಿಸಿದ್ದರು. ಹಲ್ಲೆ ನಡೆಯುತ್ತಿದ್ದಂತೆ ಮೂವರು ವಿದ್ಯಾರ್ಥಿನಿಯರು ಅಲ್ಲಿಂದ ಪರಾರಿಯಾಗಿದ್ದರು. ಅವರೆಲ್ಲರು ಕೇರಳದ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣದ ಕುರಿತಂತೆ ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ಮೊದಲಿಗೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ವಶಕ್ಕೆ ಪಡೆದವರ ಸಂಖ್ಯೆ 7ಕ್ಕೇರಿದೆ.
ಹಲ್ಲೆ ಮಾಡಿದ್ದ ತಂಡದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ಕೂಡ ಇದ್ದ ಎನ್ನುವುದು ಗಮನಾರ್ಹವಾಗಿದೆ. ಘಟನೆಯಲ್ಲಿ ಭಾಗಿ ಆಗಿದ್ದವರನ್ನು ವಶಕ್ಕೆ ಪಡೆಯಲಾಗುತ್ತದೆ, ಇದಕ್ಕಾಗಿ ತಂಡವನ್ನು ರಚನೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು