2:02 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸೋಮವಾರಪೇಟೆ | ಆಕಸ್ಮಿಕ ಬೆಂಕಿ ಅವಘಡ: ಮಾಜಿ ಯೋಧ ದುರ್ಮರಣ

04/03/2026, 14:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ತಾಲ್ಲೂಕಿನ ತೊಳೂರು ಶೆಟ್ಟಳ್ಳಿಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಮಾಜಿ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ತೊಳೂರು ಶೆಟ್ಟಳ್ಳಿ ಜಂಕ್ಷನ್ ನಿವಾಸಿ ಹೆಚ್. ಎ ವೆಂಕಟೇಶ್ (64) ಮೃತ ದುರ್ದೈವಿ. ಮನೆಯಲ್ಲಿ ತೋಟದ ಕೆಲಸಕ್ಕೆ ಎಂದು ತಂದು ಇಡಲಾಗಿದ್ದ ಪೆಟ್ರೋಲ್ ಸೋರಿಕೆಯಾಗಿದ್ದು, ಆಕಸ್ಮಿಕ ಬೆಂಕಿ ತಗುಲಿಕೊಂಡಿದ್ದು, ಗಂಗ್ರಿನ್ ನಿಂದ ಒಂದು ಕಾಲನ್ನು ಕಳೆದುಕೊಂಡಿದ್ದ ವೆಂಕಟೇಶ್ ಆಕಸ್ಮಿಕ ಬೆಂಕಿ ಇಂದ ಮನೆಯಿಂದ ಹೊರ ಬರಲು ಸಾಧ್ಯವಾಗದೆ ತೀವ್ರ ಸ್ವರೂಪದ ಗಾಯಗಳಿಂದ ಮೃತಪಟ್ಟಿದ್ದಾರೆ. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಹಾಯಕ್ಕೆ ಯಾರೂ ಇರಲಿಲ್ಲ ಎನ್ನಲಾಗಿದ್ದು, ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸುಟ್ಟು ಕರಕಲಾಗಿದೆ. ಬೆಂಕಿಯನ್ನು ಗಮನಿಸಿ ಸ್ಥಳಕ್ಕೆ ಅಗ್ನಿ ಶಾಮಕ ದಳ ಬರುವಷ್ಟರಲ್ಲಿ ವೆಂಕಟೇಶ್ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದರು. ಘಟನೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು