ಇತ್ತೀಚಿನ ಸುದ್ದಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಜೂ.23ರಂದು ಜಾರಿ ನಿರ್ದೇಶನಾಲಯ ಎದುರು ಹಾಜರು ಸಾಧ್ಯತೆ
21/06/2022, 09:23
ಹೊಸದಿಲ್ಲಿ(reporterkarnataka.com): ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಒಂದು ವಾರದ ಬಳಿಕ ದೆಹಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು
ಸೋಮವಾರ ಸಂಜೆ ಸರ್ ಗಂಗಾರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಮನೆಯಲ್ಲಿ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಈ ಮಧ್ಯೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಜೂನ್ 23 ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, ಅಂದು ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ಈಗಾಗಲೇ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ನಾಲ್ಕು ಬಾರಿ ವಿಚಾರಣೆ ನಡೆಸಿದೆ.