8:42 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2 ಸರಕಾರ !!

28/07/2021, 07:53

ಬೆಂಗಳೂರು(reporterkarnataka news): ಬಸವರಾಜ ಬೊಮ್ಮಾಯಿ ಅವರನ್ನೇ ಮುಖ್ಯಮಂತ್ರಿ ಮಾಡುವುದಾದರೆ ಇಷ್ಟೆಲ್ಲ ರಂಪಾಟ ಮಾಡಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಅಗತ್ಯವಿತ್ತೇ..? ಇದು, ಬೊಮ್ಮಾಯಿ ನೂತನ ಮುಖ್ಯಮಂತ್ರಿ ಎಂದು ಬಿಜೆಪಿ ವರಿಷ್ಠರು ಘೋಷಣೆ ಮಾಡಿದ ಕ್ಷಣ ರಾಜ್ಯದ ಜನರಲ್ಲಿ ಮಾತ್ರವಲ್ಲದೆ, ಬಿಜೆಪಿಯೊಳಗೆ ಮೂಡಿ ಬಂದ ಪ್ರಶ್ನೆ. 

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ಹಾಗೂ ಪಕ್ಷದೊಳಗಿನ ಒಂದು ಗುಂಪು ಹಲವು ತಿಂಗಳಿನಿಂದ ಸಾಕಷ್ಟು ಕೆಲಸ ಮಾಡಿತ್ತು. ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ.ಯೋಗೀಶ್ವರ್, ಅರವಿಂದ ಬೆಲ್ಲದ್ ಇವರೆಲ್ಲ ಪಕ್ಷದೊಳಗಿನ ಪ್ರಬಲ ನಾಯಕರ ಬೆಂಗಾವಲಿನಲ್ಲಿಯೇ ಯಡಿಯೂರಪ್ಪ ವಿರುದ್ಧ ಬಂಡಾಯ ಸಾರಿದ್ದರು ಎನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಚಾರ. ಈ ನಡುವೆ ಅದಕ್ಕೆ ಪೂರಕ ಎನ್ನುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿತ್ತು. ಮುಖ್ಯಮಂತ್ರಿ ಬದಲಾವಣೆ ಕುರಿತು ಬಹಳಷ್ಟು ಅಬ್ಬರ ತಾಳ ಕೇಳಿ ಬಂದಿತ್ತು. ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಿ ಅವರ ಪ್ರಭಾವವಿಲ್ಲದ ನಾಯಕನನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ರಾಜ್ಯ ಬಿಜೆಪಿಯ ಗುಂಪೊಂದು ಪ್ರಬಲ ಕನಸು ಕಂಡಿತ್ತು. ಆದರೆ ಅದೆಲ್ಲ ನುಚ್ಚುನೂರಾಗಿದೆ. ಯಡಿಯೂರಪ್ಪ ಅವರ ಬಹು ಆಪ್ತ ವಲಯಕ್ಕೆ ಸೇರಿದ ಬೊಮ್ಮಾಯಿ ಅವರನ್ನು ಹೊಸ ಮುಖ್ಯಮಂತ್ರಿಯಾಗಿ ಘೋಷಣೆ ಮಾಡುವ ಮೂಲಕ ಬಿಎಸ್ ವೈ ಅವರನ್ನು ಹೊರತುಪಡಿಸಿ ಕರ್ನಾಟಕದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಬಿಜೆಪಿ ಹೈಕಮಾಂಡ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.ಅದಲ್ಲದೆ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಆಯ್ಕೆಯಾದ ತಕ್ಷಣ ಮಾಧ್ಯಮ ಜತೆ ಮಾತನಾಡಿದ ಬೊಮ್ಮಾಯಿ ಅವರು ಯಡಿಯೂರಪ್ಪ ನನ್ನ ರಾಜಕೀಯ ಗುರು. ಅವರ ಮಾರ್ಗದರ್ಶನದಲ್ಲಿ ಕೆಲಸ ಮುಂದುವರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಯಡಿಯೂರಪ್ಪ ಅವರ ಗೆಲುವು ಆಗಿದೆ.

ಮುಂದೆ ಬೊಮ್ಮಾಯಿ ಸರಕಾರದಲ್ಲಿ ಯಡಿಯೂರಪ್ಪ ಅವರ ಮಾತು ನಡೆಯುತ್ತದೆಯೇ ಹೊರತು ಇತರರದ್ದಲ್ಲ ಎನ್ನುವುದು ಕೂಡ ಅಷ್ಟೇ ಸ್ಪಷ್ಟ.

ಇತ್ತೀಚಿನ ಸುದ್ದಿ

ಜಾಹೀರಾತು