ಇತ್ತೀಚಿನ ಸುದ್ದಿ
ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ: ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಎಸ್ ಐಟಿ ತನಿಖೆಗೆ ಆಗ್ರಹ
31/07/2023, 20:14
ಮಂಗಳೂರು(reporterkarnataka.com):ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರದ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಪುರಭವನದ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಪ್ರಕರಣವನ್ನು ಎಸ್ ಐಟಿಗೆ ವಹಿಸಬೇಕೆಂದು ಸರಕಾರವನ್ನು ಒತ್ತಾಯಿಸಲಾಯಿತು.
ಈ ಸಂಧರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ , ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೇರಿದಂತೆ ಅನೇಕ ಮುಖಂಡರು
ಉಪಸ್ಥಿತರಿದ್ದರು.