12:27 PM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

21/02/2024, 17:52

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.
ಸೌಜನ್ಯಾ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿಗೆ ಸ್ಪಂದಿಸಿದ ಹೈಕೋರ್ಟ್ ರಾಜ್ಯ ಸರಕಾರ ಮತ್ತು ಸಿಬಿಐಗೆ ನೋಟಿಸ್‌ ಜಾರಿ ಮಾಡಿದೆ. ಮೃತ ಸೌಜನ್ಯಳ ತಂದೆ ಚಂದಪ್ಪ ಗೌಡ ಅವರು ಸಲ್ಲಿಸಿದ್ದ ತಕರಾರು ಅರ್ಜಿ ನ್ಯಾ| ಕೆ.ನಟರಾಜನ್‌ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿದೆ.
ಪ್ರಕರಣದಿಂದ ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಸಿಬಿಐ ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ, ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್‌ ರಾವ್‌‌ ಅವರನ್ನೂ ಪ್ರತಿವಾದಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು