4:04 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಸೌಜನ್ಯ ಪರ ಹೋರಾಟಕ್ಕೆ ಮಠದ ಸಂಪೂರ್ಣ ಬೆಂಬಲ: ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಘೋಷಣೆ

03/09/2023, 19:49

ಬೆಳ್ತಂಗಡಿ(reporterkarnataka.com): ಸಿಬಿಐ ತನಿಖೆ ನಂತರವೂ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಿಜವಾದ ಅಪರಾಧಿಗಳಿಗೆ ಶಿಕ್ಷೆ ನೀಡಿ ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಸತ್ಯ, ನ್ಯಾಯಕ್ಕಾಗಿ ನಾವೆಲ್ಲರೂ ಒಂದಾಗಬೇಕು. ಸತ್ಯ, ನ್ಯಾಯ,‌ಧರ್ಮದ ಹೋರಾಟಕ್ಕೆ ಮಠದ ಬೆಂಬಲವಿದೆ ಎಂದು ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ಹಾಗೂ ಪ್ರಕರಣದ ನೈಜ ಆರೋಪಿಗಳನ್ನು ರಕ್ಷಣೆ ಮಾಡಿದವರನ್ನು ಕಾನೂನಿಗೆ ಒಪ್ಪಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಭಾನುವಾರ ನಡೆದ ಬೃಹತ್ ಪ್ರತಿಭಟನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಕರಣದಲ್ಲಿ ಸಂತೋಷ್ ರಾವ್ ಅವರನ್ನು ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿದೆ. ಅವರು ಗೌರವಯುತ ಜೀವನ ನಡೆಸಲು ಸರಕಾರ ನೆರವಾಗಬೇಕು. ಸೌಜನ್ಯ ಅವರ ತಾಯಿ ಕುಸುಮಾವತಿ ಕುಟುಂಬಕ್ಕೆ ರಕ್ಷಣೆ ನೀಡಬೇಕು, ತನಿಖಾಧಿಕಾರಿ ಹಾಗೂ ವೈದ್ಯಾಧಿಕಾರಿಯನ್ನು ತನಿಖೆಗೊಳಪಡಿಸಬೇಕು ಎಂದು ಸ್ವಾಮೀಜಿ ನುಡಿದರು.
ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಅವರು ಮಾತನಾಡಿ, ಗ್ರಾಮ, ತಾಲೂಕು, ಜಿಲ್ಲೆಗಳಲ್ಲಿ ಪ್ರತಿಭಟನೆ ಮುಂದುವರಿಸಲಾಗುವುದು. ನ್ಯಾಯ ಸಿಗುವವರೆಗೂ ನಾವು ವಿರಮಿಸುವುದಿಲ್ಲ. ನಮ್ಮ ಹೋರಾಟ ಸತ್ಯ ಮತ್ತು ಧರ್ಮಕ್ಕಾಗಿ ಎಂದರು.
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿ, ಸಂತೋಷ್ ರಾವ್ ಮತ್ತು ಸೌಜನ್ಯ ಅವರ ಕುಟುಂಬಕ್ಕೆ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು.ದ.ಕ. ಮತ್ತು ಉಡುಪಿಯ ಶಾಸಕರು ಮತ್ತು ಸಂಸದರು ಎರಡೂ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳನ್ನು ನೀಡಬೇಕು. ಮರು ತನಿಖೆಗೆ ಸರ್ಕಾರ ಆದೇಶ ನೀಡುವವರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ಹೇಳಿದರು.
ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ಮಾತನಾಡಿ, 11 ವರ್ಷಗಳಿಂದ ಸೌಜನ್ಯ ಅವರ ತಾಯಿ ಕುಸುಮಾವತಿ ಅವರನ್ನು ಬೆಂಬಲಿಸುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರದು ಹುಚ್ಚುತನದ ಹೋರಾಟವಲ್ಲ. ಸೌಜನ್ಯ ಪ್ರಕರಣದ ಆರೋಪಿಗೆ ಶಿಕ್ಷೆ ಕೊಡಿಸಬೇಕು ಎಂದರು.
ಒಡನಾಡಿ ಸೇವಾ ಸಂಸ್ಥೆಯ ವಕೀಲ ಶ್ರೀನಿವಾಸ್ ಮಾತನಾಡಿ, ಪ್ರಕರಣದ ಮರುತನಿಖೆಗೆ ಯಾವುದೇ ಕಾನೂನಿನ ಅಡಚಣೆ ಇಲ್ಲ. ತನಿಖೆ ನಡೆಸಲು ಸರ್ಕಾರ ಎಸ್‌ಐಟಿ ರಚಿಸಬಹುದು. ಸಿಎಂ ಹಾಗೂ ಗೃಹ ಸಚಿವರಿಗೆ ನ್ಯಾಯ ದೊರಕಿಸುವಲ್ಲಿ ಆಸಕ್ತಿ ಇಲ್ಲ ಎಂಬುದು ಅವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ನುಡಿದರು.
ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಅವರು ಮಾತನಾಡಿ, ‘ನ್ಯಾಯಾಂಗ ತನಿಖೆಗಾಗಿ ನಮ್ಮ ಹೋರಾಟ.

ಸೌಜನ್ಯಳ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು ಎಂದರು.
ಒಡನಾಡಿ ಸೇವಾ ಸಂಸ್ಥೆ ಸಹ ಸಂಸ್ಥಾಪಕ ಎಂ.ಎಲ್.ಪರಶುರಾಮ್ ಅವರು ಮಾತನಾಡಿ, 12 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸೌಜನ್ಯ ಅವರ ಕುಟುಂಬದೊಂದಿಗೆ ಜನರು ನಿಲ್ಲಬೇಕು. ಪ್ರಕರಣದಲ್ಲಿ ಖುಲಾಸೆಗೊಂಡ ಸಂತೋಷ್ ರಾವ್ ಅವರು ಸಾಕಷ್ಟು ನೋವು ಅನುಭವಿಸಿದ್ದಾರೆ. ಅವರ ಕುಟುಂಬವು ಕಷ್ಟಗಳನ್ನು ಎದುರಿಸುತ್ತಿದೆ ಎಂದು ಹೇಳಿದರು.
ಮಾನವ ಹಕ್ಕುಗಳ ಹೋರಾಟಗಾರ್ತಿ ಗೀತಾ, ತಮ್ಮಣ್ಣ ಶೆಟ್ಟಿ, ಸೌಜನ್ಯ ತಾಯಿ ಕುಸುಮಾವತಿ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳ್ತಂಗಡಿ ಹಾಗೂ
ಧರ್ಮಸ್ಥಳ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ಪ್ರತಿಭಟನಾ ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು