12:14 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಸೌಲಭ್ಯಗಳು ನಿಗದಿತ ಸಮುದಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸರಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಬೇಕು: ಜಿಲ್ಲಾಧಿಕಾರಿ ಅಕ್ರಂ ಪಾಷ

13/12/2023, 21:17

ಕೋಲಾರ(reporterkarnataka.com): ಇಲಾಖೆಗಳಿಗೆ ನಿಗದಿಪಡಿಸಲಾಗಿರುವ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿಯಲ್ಲಿ ನೀಡಲಾಗಿರುವ ಗುರಿ ಸಾಧಿಸಿ ಆಯಾ ಸಮುದಾಯದವರಿಗೆ ಲಭ್ಯವಾಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಣದಲ್ಲಿ ನಿಗಧಿಪಡಿಸಲಾಗಿದ್ದ 2023-24ನೇ ಸಾಲಿನ ವಿವಿಧ ಇಲಾಖೆಗಳಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ 2023-ನವೆಂಬರ್ ಅಂತ್ಯಕ್ಕೆ ವೇಳೆಗೆ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಿಗದಿಪಡಿಸಲಾಗಿರುವ ಯೋಜನೆಯಡಿ ಎಲ್ಲಾ ಇಲಾಖೆಗಳಲ್ಲಿ ಬರುವ ಸೌಲಭ್ಯಗಳನ್ನು ನಿಗದಿತ ಸಮುದಾಯಗಳಿಗೆ ತಲುಪುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಸರ್ಕಾರದ ನಿರೀಕ್ಷೆಗಳಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ತಮ್ಮ ಇಲಾಖೆಯ ಮುಖ್ಯಸ್ತರು ನಿಗಧಿಪಡಿಸಿರುವ ಗುರಿಯನ್ನು ಸಾಧಿಸಲು ಕ್ರಿಯಾ ಯೋಜನೆಯನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಪ್ರಸ್ತುತ 2023ನೇ ಸಾಲಿನ ನವೆಂಬರ್ ಅಂತ್ಯದ ವೇಳೆಗೆ ವಿವಿಧ ಇಲಾಖೆಗಳಿಂದ ನಿಗದಿಪಡಿಸಿರುವ ಗುರಿಗಳಿಗೆ ವಿಶೇಷ ಘಟಕ ಯೋಜನೆಯಡಿ ಜಿಲ್ಲೆಗೆ ಒಟ್ಟು 16739.33 ಲಕ್ಷಗಳು ಹಂಚಿಕೆಯಾಗಿದ್ದು ಒಟ್ಟು
811.89 ಲಕ್ಷಗಳು ಬಿಡುಗಡೆಯಾಗಿರುತ್ತದೆ.
ಗಿರಿಜನ ಉಪ ಯೋಜನೆಯಡಿಯಲ್ಲಿ ಒಟ್ಟು 5018.94 ಲಕ್ಷಗಳು ಹಂಚಿಕೆಯಾಗಿದ್ದು, ಒಟ್ಟು 1553.51 ಲಕ್ಷಗಳು ಬಿಡುಗಡೆಯಾಗಿರುತ್ತದೆ. ಈ ಪೈಕಿ 2023 ನವೆಂಬರ್ ಅಂತ್ಯದ ವೇಳೆಗೆ ವಿಶೇಷ ಘಟಕ ಯೋಜನೆಯಡಿ ಶೇ.71 ಹಾಗೂ ಗಿರಿಜನ ಉಪಯೋಜನೆಯಡಿ ಶೇ.68 ಮೊತ್ತದ ಅನುದಾನ ವೆಚ್ಚ ಮಾಡಲಾಗಿದೆ. ಪ್ರಸ್ತುತ 3ನೇ ತ್ರೈಮಾಸಿಕದ ಅನುದಾನದ ಬಿಡುಗಡೆಯಾಗಿದ್ದು, ಶೀಘ್ರವಾಗಿ ಶೇ.100 ರಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಮೂಲಕ ರಾಜ್ಯದ ಪ್ರಗತಿಯಲ್ಲಿ ಜಿಲ್ಲೆಯ ಸಾಧನೆಯು ಉನ್ನತ ಮಟ್ಟ ತಲುಪುವಂತೆ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಕೃಷಿ ಜಂಟಿ ನಿರ್ದೇಶಕಿ ಸುಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕಿ ಸೌಮ್ಯ ವರ್ಣಿಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ತೋಟಗಾರಿಕ ಉಪನಿರ್ದೇಶಕರಾದ ಕುಮಾರಸ್ವಾಮಿ, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು