5:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಡಾ.ಭರತ್ ಶೆಟ್ಟಿ ಆಗ್ರಹ

25/07/2023, 19:32

ಸುರತ್ಕಲ್(reporterkarnataka.com):ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ.
ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ. ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಆರೋಪಿಸಿದ್ದಾರೆ.
ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಕ್ಯಾಮೆರಾ ಇಟ್ಟು
ಚಿತ್ರೀಕರಣ ಮಾಡಲಾಗಿತ್ತು ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವಂತೆ, ಇದೀಗ ಪ್ರಕರಣ ತಿರುಚಲು ಹಾಗೂ ಏನೂ ಆಗಿಲ್ಲವೆಂಬತೆ ಮಾಡಲು ಮೊಬೈಲ್ ಅದಲು ಬದಲು ಮಾಡಲಾಗಿದೆ ಎಂಬ ಸಂಶಯ ಜನರಲ್ಲಿ ಉಂಟಾಗಿದೆ. ಮೊದಲು ಇದಕ್ಕೆ ಉತ್ತರ ನೀಡಿ ಎಂದು ಆಗ್ರಹಿಸಿದ್ದಾರೆ.
ಉಡುಪಿ ಪೊಲೀಸರು ಘಟನೆ ನಡೆದಿರುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ದಿಢೀರ್ ಆಗಿ ವಿದ್ಯಾರ್ಥಿನಿಯರನ್ನು ವಜಾ ಗೊಳಿಸಲು ಕಾರಣ ಏನು, ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವಿಲ್ಲ. ಕೇರಳ ಮೂಲದ ವಿದ್ಯಾರ್ಥಿಗಳಾಗಿರುವುದರಿಂದ ಲವ್ ಜಿಹಾದ್ ಸಹಿತ, ವಿವಿಧ ವಿದ್ವಂಸಕ ಕೃತ್ಯ ಎಸಗಲು
ಇದೊಂದು ಬ್ಲ್ಯಾಕ್ ಮೈಲ್ ಷಡ್ಯಂತ್ರವಾಗಿರುವ ಸಾಧ್ಯತೆಯಿದೆ ಎಂದು ಶಾಸಕರು ಸಂಶಯ ವ್ಯಕ್ತಪಡಿಸಿದ್ದಾರೆ.
ಪ್ರಕರಣವನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳುವ ಬದಲು ಉಡಾಫೆಯಾಗಿ ವರ್ತಿಸಿದರೆ ಮುಂದೊಂದು ದಿನ ಕಂಟಕಪ್ರಾಯವಾಗಬಹುದು.
ಇದರ ಹಿಂದೆ ನಿಷೇಧಿತ ಸಂಘಟನೆ ಪಿ ಎಫ್ ಐ ಕೈವಾಡ ಇದ್ದರೆ ತನಿಖೆ ನಡೆಸಿ, ಹಿಂದೂ ಸಮುದಾಯದ ಯುವತಿಯರು ಬಲಿಪಶುವಾಗದಂತೆ ರಕ್ಷಣೆಯನ್ನು ನೀಡುವ ಕೆಲಸ ಮೊದಲು ಮಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಟ್ವೀಟ್ ಮಾಡಿ ಸರಕಾರ, ತನಿಖಾ ಇಲಾಖೆ ಹಾಗೂ ಸಾರ್ವಜನಿಕ ರನ್ನು ಎಚ್ಚರಿಸುವ ಕೆಲಸ ಮಾಡಿದ ಮಾತ್ರಕ್ಕೆ, ರಾತ್ರಿ ಸಮಯದಲ್ಲಿ ಯುವತಿಯ ಮನೆಗೆ ತೆರಳಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಾಗದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ, ಭಾರತೀಯ ಜನತಾ ಪಕ್ಷಯ ಭದ್ರ ಕೋಟೆಯಾಗಿರುವ ಕರಾವಳಿ ಭಾಗವನ್ನು ಗುರಿಯಾಗಿಸಿ ಇರಿಸಿಕೊಂಡು ಹಿಂದೂ ಕಾರ್ಯಕರ್ತರ ಗಡಿಪಾರು, ಸುಳ್ಳು ಕೇಸುಗಳನ್ನು ದಾಖಲಿಸಲು ಪೂರ್ವ ತಯಾರಿ ನಡೆಸಿದೆ.
ಇದರ ಮುಂದುವರಿದ ಭಾಗವಾಗಿ ಟ್ವೀಟ್ ಮಾಡಿದ ರಶ್ಮಿ ಸಮಂತ ಅವರನ್ನು ಕೂಡ ತನಿಖೆ ನೆಪದಲ್ಲಿ ಪ್ರಕರಣ ದಾಖಲಿಸಿ, ಇಡೀ ಪ್ರಕರಣವನ್ನು ತಿರುಚಲು ಮುಂದಾಗಿರುವಂತಿದೆ.
ಜಿಲ್ಲೆಯಲ್ಲಿ ಹಾಗೂ ಕರಾವಳಿಯಲ್ಲಿ ಸಂಘರ್ಷಮಯ ವಾತಾವರಣಕ್ಕೆ ಸರಕಾರ ಎಡೆ ಮಾಡಿಕೊಡಬಾರದು. ದ್ವೇಷ ರಾಜಕಾರಣದಿಂದ ಕಾನೂನು ಹದೆಗೆಟ್ಟಲ್ಲಿ ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೇ ಜವಾಬ್ದಾರಿಯಾಗಲಿದೆ
ಎಂದು ಡಾ. ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು