ಇತ್ತೀಚಿನ ಸುದ್ದಿ
ಸ್ಪರ್ಧಾತ್ಮಕ ಪರೀಕ್ಷೆ: ಆನ್ ಲೈನ್ ತರಬೇತಿಯ ಮೊಬೈಲ್ ಆ್ಯಪ್ ಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ
26/09/2023, 16:16
ಉಡುಪಿ(reporterkarnataka.com): ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮೂಲಕ ಆನ್ ಲೈನ್ ತರಬೇತಿ ನೀಡುವ ಸಲುವಾಗಿ ಮೊಬೈಲ್ ಆ್ಯಪ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿದಿನ ಸಂಜೆ 5.30 ರಿಂದ 7 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ. ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಏಕಕಾಲದಲ್ಲಿ ತರಬೇತಿ ನಡೆಯಲಿದೆ.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.