7:39 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ ವೃತ್ತಿ ಯಲ್ಲಿದ್ದರೆ ಯಶಸ್ಸು ಖಂಡಿತ: ಡಾ. ನಾಗರತ್ನ ಕೆ. ಎ.

20/06/2021, 23:41

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ IQAC ವಿಭಾಗದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕ್ರಿಯಾಶೀಲತೆ ಮತ್ತು ಉತ್ಸಾಹದೊಂದಿಗೆ ಯಶಸ್ಸು’ ಎಂಬ ಆನ್ಲೈನ್ ಕಾರ್ಯಾಗಾರ ಜರುಗಿತು. 
ರಾಜ್ಯ ಯುವ ಅಧಿಕಾರಿ ವೈ. ಎನ್. ಉಪಿನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉತ್ಸಾಹ ಕಳೆಗುಂದದೆ ಯಶಸ್ಸಿನೆಡೆಗೆ ಮುನ್ನಡೆಯುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜಕರಾದ ಡಾ. ನಾಗರತ್ನ ಕೆ. ಎ. ಮಾತನಾಡಿ, ಈ ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ  ವೃತ್ತಿಯಲ್ಲಿದ್ದರೆ ಯಶಸ್ಸು ಖಂಡಿತ ಎಂದರು.
ಸದಾ ಕ್ರಿಯಾಶೀಲರಾಗಿರುವುದರಿಂದ ಮನಸ್ಸು ಸಕಾರಾತ್ಮಕ ಚಿಂತನೆಗಳಿಂದ ಕೂಡಿರುತ್ತದೆ.  ಇತರರನ್ನು ಅಭಿವೃದ್ಧಿಯತ್ತ  ಪ್ರೇರೇಪಿಸಲು   ಸಹಕಾರಿಯಾಗುತ್ತದೆ. ಇದರಿಂದ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.


ಅಂತಾರಾಷ್ಟ್ರೀಯ ತರಬೇತುದಾರರಾದ ಡಾ.ಕಿಶೋರ್ ಶ್ರೀನಿವಾಸನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉತ್ಸಾಹದೊಂದಿಗೆ ಕ್ರಿಯಾಶೀಲತೆ ಇದ್ದರೆ ಯಶಸ್ಸನ್ನು ಗಳಿಸಲು ಸಾಧ್ಯ ಎಂಬುದಾಗಿ ತರಬೇತಿಯನ್ನು ನೀಡಿದರು. 


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಆಲ್ವಿನ್ ಸೆರಾವೊ  ಶುಭಕೋರಿದರು. ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಷನ್  ಸಾಂತುಮಯೋರ್ ಕಾರ್ಯಕ್ರಮ ರೂಪಿಸಿದರು.
ಪದುವ ಕಾಲೇಜಿನ  ಉಪನ್ಯಾಸಕಿ  ಝೀನಾ ಕಾರ್ಯಕ್ರಮ ನಿರೂಪಿಸಿದರು. IQAC ಅಧಿಕಾರಿ   ಮಿನೆಜಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು