ಇತ್ತೀಚಿನ ಸುದ್ದಿ
ಸ್ಪೀಕರ್ ಕುರಿತು ಅವಹೇಳನಕಾರಿ ಪೋಸ್ಟ್: ಶ್ರೀರಾಮ ಸೇನೆ ಮುಖಂಡನ ವಿರುದ್ಧ ಪೊಲೀಸರಿಗೆ ದೂರು
27/05/2023, 16:17
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸಂವಿಧಾನಿಕ ಹುದ್ದೆಯಾದ ಸ್ಪೀಕರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ನೀಡಲಾಗಿದೆ.
ಚಿಕ್ಕಮಗಳೂರು ನಗರದಲ್ಲಿ ಘಟನೆ ನಡೆದಿದೆ. ಶ್ರೀರಾಮಸೇನೆ ಮುಖಂಡ ಪ್ರೀತೇಶ್ ವಿರುದ್ದ ದೂರು ನೀಡಲಾಗಿದೆ.
ಕಾಂಗ್ರೆಸ್ ಐಟಿ ಸೆಲ್ ನಿಂದ ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಇದು ಕೋಮುದ್ವೇಷ ಹಾಗೂ ಜನಾಂಗದ ನೋವಿಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚಿಕ್ಕಮಗಳೂರು ನಗರದಲ್ಲಿರುವ ಸೈಬರ್ ಠಾಣೆ ದೂರು ಸಲ್ಲಿಸಲಾಗಿದೆ.
ಕಾಂಗ್ರೆಸ್ ಐಟಿ ಸೆಲ್ ಜಿಲ್ಲಾ ಕಾರ್ಯದರ್ಶಿ ಎಂ.ಎಲ್.ಎ. ಮಂಜು ಎಂಬವರು ದೂರು ನೀಡಿದ್ದಾರೆ.