7:17 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Speaker speaking | ಬಡವರ ಮನೆ ನಿರ್ಮಾಣಕ್ಕೆ ಕಡಿಮೆ ದರದಲ್ಲಿ ಮರಳು ನೀಡಿ: ಸ್ಪೀಕರ್ ಯು.ಟಿ. ಖಾದರ್

25/02/2025, 23:01

ಮಂಗಳೂರು(reporterkarnataka.com): ಅಭಿವೃದ್ಧಿಗಾಗಿ ಏನಾದರೂ ಮಾಡಿ. ಬಡವರ ಮನೆ ನಿರ್ಮಾಣಕ್ಕೆ ಕಡಿಮೆ ದರದಲ್ಲಿ ಮರಳನ್ನು ನೀಡಿ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಸ್ಯಾಂಡ್ ಬಜಾರ್ ಆ್ಯಪ್ ತೆರೆಯುವ ಮೂಲಕ ಕಡಿಮೆ ದರದಲ್ಲಿ ಎಲ್ಲರಿಗೂ ಮರಳನ್ನು ನೀಡಲಾಗುತ್ತಿತ್ತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅದನ್ನು ಸ್ಥಗಿತಗೊಳಿಸಿ ಜನರಿಗೆ ಮರಳು ಸಿಗದಂತೆ ಮಾಡಿತು ಎಂದು ದೂರಿದರು.
ನಾವು ಆಗ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ ಸಿಆರ್‌ಝೆಡ್ ಅಡಿಯಲ್ಲಿ ಮೀನುಗಾರಿಕೆ ಪ್ರದೇಶದಲ್ಲಿ ಮರಳು ದಿಬ್ಬಗಳನ್ನು ತೆರವು ಮಾಡುವಂತೆ ಮನವಿ ಮಾಡಿ ಅದಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡಿದ್ದೆವು. ಆದರೆ ಈಗ ಕೇಂದ್ರದಲ್ಲಿ ಕೂತಿರುವ ಬಿಜೆಪಿಯವರು ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಕ್ರಮ ಮರಳುಗಾರಿಕೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಸಮಸ್ಯೆಯನ್ನು ಕೇಳುವುದಲ್ಲ. ಜನರ ಸಮಸ್ಯೆಯನ್ನು ಕೇಳಬೇಕು. ಅಧಿಕಾರಿಗಳಿಗೆ ಕಚೇರಿಯನ್ನು ನೀಡಿರುವುದು ಸುಮ್ಮನೆ ಕೂರಲು ಅಲ್ಲ. ಹೊಂದಾಣಿಕೆಯಲ್ಲಿ ಕೆಲಸ ಮಾಡಲು ಎಂದರು.
ಗಣಿ ಇಲಾಖೆ ಜತೆಗೆ ಪೊಲೀಸ್ ಇಲಾಖೆ ಸ್ಪಂದಿಸುತ್ತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜಿಲ್ಲಾಧಿಕಾರಿಯವರು ಎರಡೂ ಇಲಾಖೆಯವರನ್ನು ಕೂರಿಸಿ ಸಭೆ ನಡೆಸಿ ಪರಿಹಾರ ನೀಡಬೇಕು. ಗೊಂದಲವನ್ನು ನಿವಾರಿಸಬೇಕು ಎಂದರು.

*ಶ್ವಾನ ಹಾವಳಿ ತಪ್ಪಿಸಲು ಶೆಲ್ಟರ್ ವ್ಯವಸ್ಥೆ:*
ವಿಧಾನ ಸೌಧದಲ್ಲಿ ೫೨ ಶ್ವಾನಗಳಿದ್ದು, ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಶೆಲ್ಟರ್ ವ್ಯವಸ್ಥೆಯನ್ನು ಮಾಡಲು ಯೋಜನೆಯನ್ನು ರೂಪಿಸಿದ್ದು, ವಿಧಾನಸೌಧ ಆವರಣದಲ್ಲಿಯೇ ಶೆಲ್ಟರ್ ನಿರ್ಮಿಸಲಾಗುವುದು ಎಂದರು.
ಇದಕ್ಕಾಗಿ ಈಗಾಗಲೇ ಪಿಡಬ್ಲ್ಯೂಡಿ ಮೂಲಕ ಶೆಲ್ಟರ್ ನಿರ್ಮಾಣ ಮಾಡಲಾಗುವುದು. ಶ್ವಾನಗಳು ಅಲ್ಲಲ್ಲಿ ತಿರುಗಾಡದ ರೀತಿಯಲ್ಲಿ ಪ್ರತ್ಯೇಕ ಗೇಟ್ ವ್ಯವಸ್ಥೆಯನ್ನು ರೂಪಿಸಲಾಗುವುದು. ಈ ಶ್ವಾನಗಳ ನಿರ್ವಹಣೆಗೆ ಎನ್‌ಜಿಒ ನೆರವನ್ನು ಪಡೆಯಲಾಗುವುದು ಹಾಗೂ ಅದರ ಸಂಪೂರ್ಣ ಖರ್ಚು-ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.
*ಮಾ.೩ರಂದು ಅಧಿವೇಶನ ಪ್ರಾರಂಭ:* ಮಾ.೩ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಅಂದು ರಾಜ್ಯಪಾಲರು ಸಂದೇಶ ನೀಡಲಿದ್ದಾರೆ. ಅವರ ಭಾಷಣದ ಬಗ್ಗೆ ಮಾ.೭ ರವರೆಗೆ ಚರ್ಚೆ ನಡೆಯಲಿದ್ದು, ಮಾ.೭ರಂದು ಮುಖ್ಯಮಂತ್ರಿಗಳು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಬಗ್ಗೆ ಮಾ.೨೧ ರ ವರೆಗೆ ಚರ್ಚೆ ನಡೆಸಲಾಗುವುದು ಎಂದು ಸ್ಪೀಕರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು