9:10 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್

29/05/2026, 08:57

ಜೈಪುರ(reporterkarnataka.com): ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ದೆಹಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ.
ದೆಹಲಿ ಸುತ್ತಮುತ್ತ ಭಾರಿ ಗಾಳಿ ಮತ್ತು ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಎಟಿಎಸ್‌ ಸೂಚನೆಯ ಮೇರೆಗೆ ಸಿಎಂ ಇದ್ದ ವಿಮಾನದ ಮಾರ್ಗವನ್ನು ಜೈಪುರದತ್ತ ಬದಲಾಯಿಸಿ ಅಲ್ಲಿ ಇಳಿಸಲಾಗಿದೆ. ಜೈಪುರದಿಂದ ದೆಹಲಿಗೆ ವಿಮಾನವು ಮರಳಿ ಪ್ರಯಾಣ ಬೆಳೆಸಲು ಕನಿಷ್ಠ ಇನ್ನೂ ಒಂದು ಗಂಟೆಗೂ ಅಧಿಕ ಸಮಯ ಬೇಕಾಗಬಹುದು ಎಂದು ವರದಿಯಾಗಿದೆ.

*ವಿಮಾನದಲ್ಲಿದ್ದ ಪ್ರಮುಖ ನಾಯಕರು:*
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖರು ಮತ್ತು ರಾಜ್ಯದ ಸಚಿವರ ದೊಡ್ಡ ದಂಡೇ ಈ ವಿಶೇಷ ವಿಮಾನದಲ್ಲಿದೆ. ರಣದೀಪ್ ಸಿಂಗ್ ಸುರ್ಜೇವಾಲಾ (ಕರ್ನಾಟಕ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ), ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಎ.ಎಸ್. ಪೊನ್ನಣ್ಣ, ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಅಭಿಷೇಕ್ ದತ್ ವಿಮಾನದಲ್ಲಿದ್ದರು.
ಸದ್ಯ ಜೈಪುರದಲ್ಲೇ ಸಿಎಂ ಮತ್ತು ನಾಯಕರ ತಂಡ ಹವಾಮಾನ ತಿಳಿಯಾಗುವವರೆಗೆ ಕಾಯುತ್ತಿದ್ದು, ದೆಹಲಿಯಲ್ಲಿ ವಾತಾವರಣ ಸುಧಾರಿಸಿದ ತಕ್ಷಣವೇ ಜೈಪುರದಿಂದ ದೆಹಲಿಯತ್ತ ವಿಶೇಷ ವಿಮಾನವು ಹಾರಾಟ ನಡೆಸಲಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು