10:40 PM Tuesday18 - March 2025
ಬ್ರೇಕಿಂಗ್ ನ್ಯೂಸ್
Farmers Loan | ಅರ್ಹತೆ ಇರುವ ರೈತ ಫಲಾನುಭಗಳಿಗೆ ಸಾಲ ಸೌಲಭ್ಯ: ವಿಧಾನ… ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ… Water Dispute | ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ… ಯುವನಿಧಿ ಯೋಜನೆ; ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರಕ್ಕೆ ಕ್ರಮ: ಸಚಿವ ಡಾ. ಶರಣಪ್ರಕಾಶ್… Education | ದೈಹಿಕ ಶಿಕ್ಷಕರ ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು ಪರಿಶೀಲನೆ: ಶಿಕ್ಷಣ… Solar power & Wind power | ಸೌರ ಶಕ್ತಿ ಮತ್ತು ಪವನ… Legislative Council | ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ… KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು,… Education Department | ಕನ್ನಡ ಬೋಧಿಸದ ಕೇಂದ್ರ ಪಠ್ಯಕ್ರಮ ವಿರುದ್ಧ ಕ್ರಮಕ್ಕೆ ಮುಂದಾಗಿ:… ಬಿಜೆಪಿ ತರಹ ಕೇವಲ 10% ಜನರ ಕೈಹಿಡಿದು ಶೇ. 90% ಜನರನ್ನು ಕೈಬಿಟ್ಟಿಲ್ಲ:…

ಇತ್ತೀಚಿನ ಸುದ್ದಿ

ಅಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

18/03/2025, 20:31

ನವದೆಹಲಿ (reporterkarnataka.com): ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ಇಂದು ಈ ಸಂಬಂಧ ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಇಂದು ಸಭೆ ನಡೆಸಿ ಚರ್ಚಿಸಿದರು.
ಚುನಾವಣಾ ಆಯೋಗವು ಆರ್ಟಿಕಲ್ 326, ಆರ್‌ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. UIDAI ಮತ್ತು ECI ಯ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ.
ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆ. ಆದ್ದರಿಂದ, EPIC ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326 ನೇ ವಿಧಿ, 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6) ರ ನಿಬಂಧನೆಗಳ ಪ್ರಕಾರ ಕ್ರಮ ವಹಿಸಲಾಗುವುದು. ಅದರಂತೆ, ಯುಐಡಿಎಐ ಮತ್ತು ಇಸಿಐನ ತಾಂತ್ರಿಕ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು