11:01 AM Saturday4 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

Sports | ಮಂಗಳೂರು ವಿವಿ ಅಂತ‌ರ್ ಕಾಲೇಜು ಮಹಿಳೆಯರ ಕ್ರಿಕೆಟ್‌ ಪಂದ್ಯಾಟ: ಎಸ್‌ಎಂಎಸ್‌ ಬ್ರಹ್ಮಾವರ್ ಚಾಂಪಿಯನ್, ಆಳ್ವಾಸ್ ಮೂಡಬಿದ್ರೆ ರನ್ನರ್ಸ್

11/04/2025, 10:57

ಪುತ್ತೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸಂತ ಫಿಲೋಮಿನಾ ಕಾಲೇಜಿನ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ಎ.7 ರಂದು ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ (ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಬ್ರಹ್ಮಾವರ್ ಎಸ್‌ಎಂಎಸ್ ಕಾಲೇಜು ಚಾಂಪಿಯನ್ ಆಗಿದ್ದು, ಆಳ್ವಾಸ್ ಮೂಡಬಿದ್ರೆ ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿತು.
ಪಂದ್ಯಾಟದ ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್‌ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಆಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರಳಾಗಿ ಬ್ರಹ್ಮಾವರ ಎಸ್‌ಎಂಎಸ್ ಕಾಲೇಜಿನ ಲಕ್ಷ್ಮೀ ಅವರು ಆಯ್ಕೆಯಾದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿ’ಸೋಜರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರಿಕೆಟ್ ಎಂಬುದು ಮೈಂಡ್ ಗೇಮ್ ಜೊತೆಗೆ ಗ್ಲಾಮರಸ್ ಗೇಮ್. ಇಲ್ಲಿ ತಾಂತ್ರಿಕ ನೈಪುಣ್ಯತೆ, ಟೈಮಿಂಗ್, ದೈಹಿಕ ಕ್ಷಮತೆ, ನಿರಂತರ ಅಭ್ಯಾಸ ಬಹಳ ಮುಖ್ಯ ಜೊತೆಗೆ ಪಂದ್ಯಾಟ ಹೇಗೆ ಜಯಿಸುವುದು ಎನ್ನುವ ಜ್ಞಾನಶಕ್ತಿ ಬಹಳ ಮುಖ್ಯವಾಗುತ್ತದೆ ಎಂದರು.
ಫಿಲೋಮಿನಾ ಕಾಲೇಜಿನ ಉಪ ಪ್ರಾಂಶುಪಾಲ ಡಾ| ವಿಜಯ ಕುಮಾರ್ ಮೊಳೆಯಾರ್ ಮಾತನಾಡಿ, ಓಗಾಗಲೇ ಐಪಿಎಲ್ ಪಂದ್ಯಾಟ ನಡೆಯುತ್ತಿದೆ. ಕ್ರಿಕೆಟ್‌ನಲ್ಲಿ ಸಾಧನೆ ಮಾಡಬೇಕಾದರೆ ಬದ್ಧತೆ ಬಹಳ ಮುಖ್ಯ. ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್‌ರವರು ನಮ್ಮ ಮುಂದೆ ದಂತಕತೆಯಾಗಿ ಬೆಳೆದು ನಿಂತಿದ್ದಾರೆ. ಕಠಿಣ ಪರಿಶ್ರಮ ಮತ್ತು ಬದ್ಧತೆ ಇದ್ದಾಗ ಸಾಧನೆ ಮಾಡಲು ಸಾಧ್ಯ ಎಂದರು.
ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಡಾ.ಪ್ರಸನ್ನ, ಕ್ರಿಕೆಟ್ ಪಂದ್ಯಾಟದ ವೀಕ್ಷಕರಾಗಿರುವ ಡಾ.ಪೊಡಿಯರವರು ಉಪಸ್ಥಿತರಿದ್ದರು. ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಸ್ವಾಗತಿಸಿ, ವಿಜೇತರ ಪಟ್ಟಿ ವಾಚಿಸಿದರು. ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು