ಇತ್ತೀಚಿನ ಸುದ್ದಿ
ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕರಿಗೆ ನೆರವಿನ ಭರವಸೆ: ಪದ್ಮರಾಜ್ ಸಹಿತ ಹಲವರು ಭೇಟಿ
21/11/2022, 23:51

ಮಂಗಳೂರು(reporter Karnataka.com): ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿ ಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಕೃತಿನ್, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಭೇಟಿಯಾಗಿ ಎಲ್ಲ ರೀತಿಯ ಸಹಾಯ ನೀಡುವುದದಾಗಿ ಭರವಸೆ ನೀಡಿದರು.
ಬಳಿಕ ಪತ್ನಿ, ಮಕ್ಕಳ ಜತೆ ಸಮಾಲೋಚನೆ ನಡೆಸಿ ಅವರಿಗೂ ಧೈರ್ಯ ತುಂಬಿದರು.
ಪುರುಷೋತ್ತಮ ಅವರು 25 ವರ್ಷಗಳಿಂದ ರಿಕ್ಷಾದಿಂದ ದುಡಿದು ಕುಟುಂಬವನ್ನು ಮುನ್ನಡೆಸುತ್ತಿದರು. ಇದೀಗ ರಿಕ್ಷಾವನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದು ಭಯೋತ್ಪಾದಕ ಕೃತ್ಯವಾದ ಕಾರಣ ಸದ್ಯ ಬಿಡುಗಡೆ ಭಾಗ್ಯವಿಲ್ಲ. ಮಗಳಿಗೆ ಮದುವೆ ಕೂಡ ಫಿಕ್ಸ್ ಆಗಿದ್ದು ಇಂತಹ ಸಂಕಷ್ಟವನ್ನು ಅರಿತು ಅವರ ಕುಟುಂಬಕ್ಕೆ ಧೈರ್ಯ ತುಂಬಿ ನಿಮ್ಮ ಜೊತೆ ನಮ್ಮ ಸಮಾಜ ಕೂಡ ಇದೆ ಎಂದು ಧೈರ್ಯ ತುಂಬಲಾಯಿತು.