8:39 PM Saturday25 - April 2026
ಬ್ರೇಕಿಂಗ್ ನ್ಯೂಸ್
ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ…

ಇತ್ತೀಚಿನ ಸುದ್ದಿ

ತುಮಕೂರು ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಶ್ರೀ ಅನ್ವೇಷಣಾ -2025 ಕಾರ್ಯಕ್ರಮ

14/11/2025, 21:52

ತುಮಕೂರು(reporterkarnataka.com): ಶಿಕ್ಷಣದಲ್ಲಿನ ತಾರತಮ್ಯ ನೀತಿ ಸಲ್ಲದು ಎಂದು ತುಮಕೂರಿನ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಶ್ರೀ ಅನ್ವೇಷಣಾ -2025 ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಇಂಜಿನಿಯರಿಂಗ್ ಮೆಡಿಕಲ್, ಶಿಕ್ಷಣ ಮೇಲು ಕಲೆ ಮತ್ತು ಕಾಮರ್ಸ್ ಕೀಳು ಎಂಬ ಮನೋಭಾವ, ಪ್ರವೃತ್ತಿ ಸಮಾಜದಲ್ಲಿ, ಪೋಷಕರಲ್ಲಿ ಹೆಚ್ಚಾಗುತ್ತಿದೆ ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದರ ನಡುವೆಯೂ ಒಂದು ಸಮಾಧಾನಕರ ಸಂಗತಿ ಎಂದರೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಇಂತಹ ತಾರತಮ್ಯ ತೊಡೆದು ಹಾಕುವಲ್ಲಿ ಸ್ವಲ್ಪಮಟ್ಟಿಗೆ ಸಹಕಾರಿಯಾಗಿದೆ. ಉದಾಹರಣೆಗೆ ವಿಜ್ಞಾನದ ವಿದ್ಯಾರ್ಥಿ ಇಷ್ಟಪಟ್ಟರೆ ರಾಜಕೀಯ, ಸಮಾಜಶಾಸ್ತ್ರವನ್ನು ಅಭ್ಯಾಸ ಮಾಡಬಹುದು. ಅದೇ ರೀತಿ ಕಲಾವಿಭಾಗದ ವಿದ್ಯಾರ್ಥಿ ಆಸಕ್ತಿ ಇದ್ದರೆ ಭೌತಶಾಸ್ತ್ರ ಮತ್ತು ರಾಸಾಯನ ಶಾಸ್ತ್ರವನ್ನು ಅಭ್ಯಾಸ ಮಾಡಬಹುದು ಎಂದು ಉದಾಹರಣೆ ನೀಡಿದರು.
ಇಂದು ಶಿಕ್ಷಣ ಯಾವ ಮಟ್ಟಕ್ಕೆ ಹೋಗುತ್ತಿದೆ ಎಂದರೆ ವೈದ್ಯರೇ ವಿಧ್ವಂಸಕ, ರಾಷ್ಟ್ರದ್ರೋಹಿ ಕೆಲಸದಲ್ಲಿ ಭಾಗಿಯಾಗುತ್ತಿದ್ದಾರೆ ಎಂದರೆ ನಮ್ಮ ಶಿಕ್ಷಣ ನಮ್ಮ ಸಮಾಜ ಯಾವ ಕಡೆಗೆ ಹೋಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಜ್ಞಾನ ಎಂದರೇನು ವೈಚಾರಿಕ ಮನೋಭಾವ ಶಿಸ್ತು ಬೆಳೆಸುವುದು ಮತ್ತು ಹುಡುಕಾಟ ವಿಜ್ಞಾನ ಆಗಿದೆ. ಇಂಜಿನಿಯರಿಂಗ್, ಮೆಡಿಕಲ್ ಮಾತ್ರ ಶ್ರೇಷ್ಠ ಕಾಮರ್ಸ್ ಕನಿಷ್ಠ ಎಂಬ ಮನೋಭಾವ ಸಲ್ಲದು. ತುಮಕೂರು ಜಿಲ್ಲೆಯಲ್ಲಿ 6೦ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇದರಲ್ಲಿ ೩೦ ಸಾವಿರ ವಿದ್ಯಾರ್ಥಿಗಳು ವಿಜ್ಞಾನದ ವಿಷಯ ಕಲಿಯುತ್ತಿದ್ದಾರೆ ಜ್ಞಾನ ಎಂದಿಗೂ ಅಹಂಕಾರ ಕೊಡುವುದಿಲ್ಲ ಬದಲಿಗೆ ವಿವೇಕ ಮತ್ತು ಎತ್ತರದ ಸ್ಥಾನಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದರು. ಇತ್ತೀಚಿನ ದಿನಗಳಲ್ಲಿ ಕಾಮರ್ಸ್ ವಿಷಯ ಜಾಗತಿಕ ಮಹತ್ವ ಪಡೆಯುತ್ತಿದೆ ಅದೇ ರೀತಿ ಹೆಚ್ಚಿನ ಉದ್ಯೋಗಾವಕಾಶಗಳು ದೊರಕುತ್ತಿದೆ. ತುಮಕೂರು ಜಿಲ್ಲೆಯನ್ನು ಕರ್ಮಭೂಮಿನ್ನಾಗಿ ಮಾಡಿಕೊಂಡು ತಮ್ಮ ಸತತ ಪರಿಶ್ರಮದಿಂದ ರಾಜ್ಯಕ್ಕೆ ಮಾದರಿಯಾಗುವಂತಹ ವಿದ್ಯಾಸಂಸ್ಥೆಯನ್ನು ಕಟ್ಟಿ ಜಿಲ್ಲೆಗೆ ಅಮೂಲ್ಯ ಕೊಡುಗೆ ನೀಡಿರುವ ಡಾ.ಎಂ.ಆರ್.ಹುಲಿನಾಯ್ಕರ್ ಸಾಧನೆ ಅನನ್ಯ ಮತ್ತು ಸುವರ್ಣಾಕ್ಷರಗಳಲ್ಲಿ ಬರೆದಿಡುವಂತದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮತ್ತೊಬ್ಬ ಮುಖ್ಯ ಅತಿಥಿ ಸುಬ್ಬರಾವ್ ಮಾತನಾಡಿ, ಪಾಠ ಜೊತೆಗೆ ಸಂಸ್ಕಾರವು ಮುಖ್ಯವಾಗಿದೆ. ಸಂಸ್ಕಾರವಿಲ್ಲದ ಶಿಕ್ಷಣ ಅರಾಜಕತೆ ಅಧಃಪತನಕ್ಕೆ ನೂಕುತ್ತದೆ ಎಂಬುದಕ್ಕೆ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ವೃದ್ಧಾಶ್ರಮಗಳೇ ಸಾಕ್ಷಿಯಾಗಿದೆ ಎಂದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ನರೇಂದ್ರ ವಿಶ್ವನಾಥ್ ಮಾತನಾಡಿ, ಸೋಲು ಜೀವನದ ಕೊನೆಯಲ್ಲ. ಆದರೆ ಪ್ರಯತ್ನ ಮಾತ್ರ ಎಂದಿಗೂ ಕೊನೆಯಾಗಬಾರದು ಸಾಧಿಸುವ ಛಲ ಮತ್ತು ಸತತ ಪ್ರಯತ್ನದಿಂದ ಎಂತಹ ಸಾಧನೆ ಮಾಡಬಹುದು ಎಂಬುದಕ್ಕೆ ನಮ್ಮ ಮುಂದೆ ಅನೇಕ ಉದಾಹರಣೆಗಳಿವೆ ಎಂದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ಚಂದ್ರಶೇಖರ್, ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರದೀಪ್‌ಕುಮಾರ್ ಎಂಸಿಎ ವಿಭಾಗದ ಪ್ರೊ. ಕಾವ್ಯಕುಮಾರ್, ಭಾರತಿಶಾಂತಕುಮಾರ್ ಮೊದಲಾದವರು ಹಾಜರಿದ್ದರು. ಪೋಸ್ಟರ್, ಮಾಡೆಲ್ ಮತ್ತು ಕ್ವಿಜ್ ವಿಭಾಗದಲ್ಲಿ ತಲಾ ಐವರು ವಿದ್ಯಾರ್ಥಿಗಳು ಸೇರಿದಂತೆ 15 ವಿದ್ಯಾರ್ಥಿಗಳಿಗೆ ತೀರ್ಪುಗಾರರ ಸಮ್ಮುಖದಲ್ಲಿ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ಶ್ರೀ ಅನ್ವೇಷಣಾ ಸ್ಪರ್ಧೆಯಲ್ಲಿ ತುಮಕೂರು ಜಿಲ್ಲೆ ಎಲ್ಲಾ ತಾಲೂಕಿನ ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದ 35೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು