10:42 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬಿ.ಸಿ. ರೋಡು ಶ್ರೀ ಅನ್ನಪೂರ್ಣೇಶ್ವರೀ ದೇಗುಲದ ವಠಾರದಲ್ಲಿ ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನ

06/05/2025, 21:35

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಮಾನಸಿಕ ನೆಮ್ಮದಿ ಮನಸ್ಸಿನಲ್ಲಿದೆ. ಬ್ರಹ್ಮ ಸತ್ಯಂ ಜಗನ್ಮಿತ್ಯಂ ಎಂದು ಶಂಕಚಾರ್ಯರು ಹೇಳಿದ್ದಾರೆ. ಆತ್ಮ ಪರಮಾತ್ಮನ ಸ್ವರೂಪವೇ ಆಗಿದೆ. ನಮ್ಮ ಕರ್ತವ್ಯ ತಿಳಿದು ಸರಿಯಾದ ದಾರಿಯಲ್ಲಿ ಮುನ್ನಡೆಯಬೇಕು. ವೇದ ಅಂದರೆ ಒಳ್ಳೆಯದು. ಅದನ್ನು ತಿಳಿದು ಸ್ವೀಕರಿಸಬೇಕು. ಆಚರಿಸಬೇಕು. ಸೌಂದರ್ಯ ಲಹರಿಯಲ್ಲಿ ಹೇಳಿದಂತೆ ಕೆಟ್ಟ ಮಕ್ಕಳಿರಬಹುದು. ಕೆಟ್ಟ ತಾಯಿ ಇಲ್ಲ. ಶಂಕರರ ಅದ್ವೈತ ತತ್ವವನ್ನು ಸಾರ್ವತ್ರೀಕರಿಸಿದಾಗ ನಮ್ಮಲ್ಲಿ ಯಾವುದೇ ಭೇದ ಉಳಿಯುವುದಿಲ್ಲ ಎಂದು ಹಿರಿಯರ ಸೇವಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷ ಕೈಯೂರು ನಾರಾಯಣ ಭಟ್ ಹೇಳಿದರು.
ಅವರು ಬಿ.ಸಿ. ರೋಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ವಠಾರದಲ್ಲಿ ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನದ ಅಂಗವಾಗಿ ಶ್ರೀ ಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ತಾಲೂಕು ಘಟಕ, ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ನಾಗೇಶ ರಾವ್ , ಆರೋಗ್ಯ ಇಲಾಖಾ ನಿವೃತ್ತ ಅಧಿಕಾರಿ ಜಯರಾಮ ಪೂಜಾರಿ, ಅನಾರು ಕೃಷ್ಣ ಶರ್ಮ, ರಾಜಾರಾಮ ಐತಾಳ್ ಕಲ್ಲಡ್ಕ ಉಪಸ್ಥಿತರಿದ್ದರು.

ಪ್ರೊ. ರಾಜಮಣಿ ರಾಮಕುಂಜ ಉಪನ್ಯಾಸ ನೀಡಿದರು.
ಶಂಕರಾಚಾರ್ಯರ ಶಂಕರ ತತ್ವಗಳಲ್ಲಿ ಅನೇಕ ಸಮಸ್ಯೆಗಳಿಗೆ ಪರಿಹಾರವಿದೆ. ಸಕಲವೂ ಬ್ರಹ್ಮಮಯವಾಗಿದೆ ಎಂಬುದನ್ನು ತಿಳಿಯಬೇಕು. ಅದ್ವೈತ ಎಂಬುದು ಎರಡಿಲ್ಲ ಒಂದೇ ಎಂಬ ಭಾವವನ್ನು ತಿಳಿಸುತ್ತದೆ. ಯಾವುದರಲ್ಲಿಯೂ ಭೇದವಿಲ್ಲ. ಬುದ್ಧಿಶಕ್ತಿಯಿಂದ ಸೃಷ್ಟಿಯ ರಹಸ್ಯಗಳನ್ನು ಅರಿತು ಕೊಳ್ಳುವುದರಿಂದ ಜೀವನ ಸಾರ್ಥಕವಾಗುತ್ತದೆ ಎಂದರು.
ಆರಂಭದಲ್ಲಿ ಆರ್ಟ್ ಆಫ್ ಲಿವಿಂಗ್ ಬಂಟ್ವಾಳ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾಮಕೃಷ್ಣ ಕೋಕಳ ವಂದಿಸಿದರು. ಜಗದೀಶ ಹೊಳ್ಳ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು