ಇತ್ತೀಚಿನ ಸುದ್ದಿ
ಶೃಂಗೇರಿ ಬಳಿ ಬೈಕಿಗೆ ಕಾರು ಡಿಕ್ಕಿ: ಒಬ್ಬ ಸಾವು, ಇನ್ನೊಬ್ಬ ಗಂಭೀರ ಗಾಯ
22/07/2022, 14:24
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಶಿಡ್ಲೆ ಬಳಿ ನಡೆದಿದೆ.
ಕಾರು ಗುದ್ದಿದ್ದ ರಭಸಕ್ಕೆ ಇಬ್ಬರು ಬೈಕ್ ಸವಾರರ ಕಾಲು ತುಂಡಾಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಶೇಖರ್ ಸಾವನ್ನಪ್ಪಿದ್ದಾರೆ. ವಿಜಯೇಂದ್ರ ಎಂಬುವರ ಸ್ಥಿತಿ ಗಂಭೀರವಾಗಿದೆ.
ಇಬ್ಬರು ಶೃಂಗೇರಿ ತಾಲೂಕಿನ ಬೇಸೂರು ಗ್ರಾಮದವರು ಎಂದು ತಿಳಿದು ಬಂದಿದೆ.
ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.