ಇತ್ತೀಚಿನ ಸುದ್ದಿ
ಶೃಂಗೇರಿ ಕಾಂಗ್ರೆಸ್ ಶಾಸಕರಿಗೆ ಬಿಗ್ ಶಾಕ್: 300ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
22/11/2022, 17:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporter Karnataka@gmail.com
ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ನೀಡಲಾಗಿದೆ. 300ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಗ್ರಾಪಂ ಮಾಜಿ ಅಧ್ಯಕ್ಷೆ ಕಮಲಾ ನೇತೃತ್ವದಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಶಾಸಕ ರಾಜೇಗೌಡ ವಿರುದ್ಧ ಬೇಸತ್ತು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಕಾರ್ಯಕರ್ತರು ಅವರೇ ಶಾಮಿಯಾನ ಹಾಕಿ, ಕಾರ್ಯಕ್ರಮ ಮಾಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ರಾಜೇಗೌಡರ ಮೇಲೆ ವಿಶ್ವಾಸವಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಎಲ್ಲರನ್ನೂ ಬಿಜೆಪಿಗೆ ಮಾಜಿ ಸಚಿವ ಜೀವರಾಜ್ ಸ್ವಾಗತಿಸಿದರು. ಬಹುತೇಕ ಹಿಂದುಳಿದ ಜನಾಂಗಕ್ಕೆ ಸೇರಿದ ಕಾರ್ಯಕರ್ತರು ಬಿಜೆಪಿ ಸೇರಿದರು.ಮೀಸಲಾತಿ ಹೆಚ್ಚಿಸಿದ ಬಿಜೆಪಿಗೆ ಜಿಂದಾಬಾದ್ ಕೂಗಿ ಬಿಜೆಪಿ ಸೇರ್ಪಡೆಗೊಂಡರು.