8:54 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಶಾಲೆ ಹೆಸರು ನಮೂದಿಸಲು ರಾಜ್ಯ ಹೈಕೋರ್ಟ್ ಸೂಚನೆ

24/04/2022, 18:07

ಬೆಂಗಳೂರು(reporterkarnataka.com):

ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ವಿವೇಕನಗರದ ಶಾಂತಿನಿಕೇತನ ಪ್ರೌಢಶಾಲೆ ಸೇರಿದಂತೆ 8 ಶಾಲೆಗಳು ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಸ್ ಎಸ್ ಎಲ್ ಸಿ  ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಆದೇಶಿಸಿದೆ.

ಅರ್ಜಿದಾರರ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳ ಎಸ್‌ಎಸ್ ಎಲ್ ಸಿ ಅಂಕಪಟ್ಟಿಗಳಲ್ಲಿ ಅವರ ಶಾಲೆಗಳ ಹೆಸರು ನಮೂದಿಸಲು ನಿರಾಕರಿಸುವುದು ಏಕಪಕ್ಷೀಯ ನಿರ್ಧಾರವಾಗಲಿದೆ. ಎಸ್‌ಎಸ್ ಎಲ್ ಸಿ ವಿದ್ಯಾರ್ಥಿಗಳ ಅಂಕಪಟ್ಟಿ ಹಾಗೂ ಫಲಿತಾಂಶ ಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹಾಗೂ ನಿರ್ದೇಶಕರು ಮತ್ತು ಎಸ್‌ಎಸ್ ಎಲ್ ಸಿ ಪರೀಕ್ಷಾ ಮಂಡಳಿಗೆ ನಿರ್ದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು