ಇತ್ತೀಚಿನ ಸುದ್ದಿ
ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಶುಭ ಹಾರೈಕೆ
21/03/2025, 17:40

ಬೆಂಗಳೂರು (reporterkarnataka.com):
ರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು,15,881 ಪರೀಕ್ಷಾ ಕೇಂದ್ರಗಳಲ್ಲಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ, ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ. ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೊದಲನೇ ಹಂತ ಅದು ಅಂತ್ಯವಲ್ಲ ಆರಂಭ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಹೇಳಿದರು.
ವಿಧಾನಸಭೆಯಲ್ಲಿಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶುಭ ಕೋರಿ ಮಾತನಾಡಿದ ಸಭಾದ್ಯಕ್ಷರು ವಿದ್ಯಾರ್ಥಿಗಳು ರಾತ್ರಿ ಹಗಲೆನ್ನದೇ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ದವಾಗಿರುವ ಎಲ್ಲಾ ವಿದ್ಯಾರ್ಥಿಗಳು ಮನೋ ಸ್ಥೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.