2:17 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ: ನಂಜನಗೂಡಿನ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

12/05/2024, 11:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನಂಜನಗೂಡಿನ ಪ್ರತಿಷ್ಠಿತ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯು ಶೇಕಡ 100ಕ್ಕೆ100 ರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ.


ಕಳೆದ ಸಾಲಿನ ಮೊದಲ ಬ್ಯಾಚ್ ನಲ್ಲಿ ಶಾಲೆಯು ಶೇಕಡ 98% ಫಲಿತಾಂಶ ಪಡೆದರೆ ಈ ಬಾರಿ ಎರಡನೇ ಬ್ಯಾಚ್ ನಲ್ಲಿ ಶೇಕಡ ನೂರರಷ್ಟು ಫಲಿತಾಂಶ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.
ಪರೀಕ್ಷೆಗೆ ಹಾಜರಾಗಿದ್ದ 31 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದು ಅದರಲ್ಲಿ ಎಂಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದರೆ ,16 ವಿದ್ಯಾರ್ಥಿಗಳು ಪ್ರಥಮ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಸಂಸ್ಥೆಗೆ ಕೀರ್ತಿ ತಂದುಕೊಟ್ಟಿದ್ದಾರೆ.
ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕುಮಾರ್ ಹಾಗೂ ಮುಖ್ಯ ಶಿಕ್ಷಕಿ ರಾಜೇಶ್ವರಿ ಮಾತನಾಡಿ ಈ ಫಲಿತಾಂಶ ತರುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಶಿಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಅಲ್ಲದೆ ಶಾಲಾ ಆಡಳಿತ ಮಂಡಳಿಯ ಜವಾಬ್ದಾರಿ ಮತ್ತು ಪೋಷಕರ ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಉತ್ತಮವಾಗಿ ಬೆಳೆಯುತ್ತಿದೆ. ಮುಂದಿನ ವರ್ಷದಲ್ಲಿ ತಾಲೂಕು ಅಥವಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸುತ್ತಾ ಸಂತಸ ವ್ಯಕ್ತಪಡಿಸಿ ಫಲಿತಾಂಶದ ಬಗ್ಗೆ ವಿವರಿಸಿದರು.
ಸಂಸ್ಥೆಯ ಜಂಟಿ ಕಾರ್ಯದರ್ಶಿ, ಮಂಜುಳಾ, ಮುಖ್ಯ ಶಿಕ್ಷಕಿ ರಾಜೇಶ್ವರಿ, ಕೋ ಆರ್ಡಿನೇಟರ್ ಮಮತಾ, ಅಡ್ವೈಸರ್ ಮಂಜುಳಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು