7:47 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಸ್ಕಿ,ಯಲ್ಲಿ 3 ವಿದ್ಯಾರ್ಥಿಗಳು ಗೈರು, 810 ಮಂದಿ ಹಾಜರು

19/07/2021, 18:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಬಾಲಕಿಯರ ಪ್ರೌಢ ಶಾಲೆಯಲ್ಲಿ ಒಟ್ಟು 200 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದರು ಬಾಲಕರ ಪ್ರೌಢಶಾಲೆ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿ 2 124 ವಿದ್ಯಾರ್ಥಿಗಳು ಹಾಜರಾಗಿದ್ದರು. ಜೋಗಿನ ರಾಮಣ್ಣ ಸ್ಮಾರಕ ಪ್ರೌಢಶಾಲೆಯಲ್ಲಿ ಮೂರು ಗೈರು 191 ವಿದ್ಯಾರ್ಥಿಗಳು ಪರೀಕ್ಷೆ ಹಾಜರಿದ್ದರು. ವೀರೇಶ್ವರ ಪ್ರೌಢಶಾಲೆ 192 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದು ಕಂಡು ಬಂತು. ಆದರೆ ಜೋಗಿನ ರಾಮಣ್ಣ ಸ್ಮಾರಕ ಪ್ರೌಢಶಾಲೆಯಲ್ಲಿ ಎರಡು ಹೆಣ್ಣು ಗೈರು ಒಂದು ಗಂಡು ವಿದ್ಯಾರ್ಥಿ ಗೈರು ಇದ್ದಿದ್ದು ಕಂಡುಬಂತು. ಯಾವುದೇ ಕಿರಿಕಿರಿಯಿಲ್ಲದೆ ಪರೀಕ್ಷೆಗಳು ಒಟ್ಟು ವಿದ್ಯಾರ್ಥಿಗಳು 8 10 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಸಮನ್ವಯ ಶಿಕ್ಷಣ ಅಧಿಕಾರಿ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬುವುದರ ಜೊತೆಗೆ ಶುಭ ಹಾರೈಸಿದ್ದಾರೆ.

ಕೊರೊನಾ ಎರಡನೇ ಅಲೆಯಿಂದಾಗಿ ಮಾಡಲಾಗಿದ್ದ ಲಾಕ್ ಡೌನ್ ಅನ್ನು ತೆರವುಗೊಳಿಸಿದ ನಂತರ ನಡೆಸಲಾಗುತ್ತಿರುವ ಎಸ.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದಾಗಿ ಮಸ್ಕಿಯ ಅಭಿನಂದನ್ ಸಂಸ್ಥೆಯು ನಗರದ ಪರೀಕ್ಷಾ ಕೇಂದ್ರಗಳಲ್ಲಿ ಒಂದಾದ ಸರಕಾರಿ ಬಾಲಕಿಯರ ಪ್ರೌಢ ಶಾಲೆ ಆವರಣವನ್ನು ಸ್ವಚ್ಛಗೊಳಿಸಿ ಸಸಿಗಳನ್ನು ನೆಟ್ಟು ರಂಗೋಲಿಯನ್ನು ಹಾಕಿ ಅಲಂಕರಿಸಿತ್ತು. 

ಇದರೊಂದಿಗೆ ಪರೀಕ್ಷೆ ಬರೆಯುವಂತಹ ವಿದ್ಯಾರ್ಥಿಗಳಿಗೆ ಹೂ ನೀಡುವ ಮೂಲಕ ಶುಭ ಕೋರಲಾಯಿತು. ಹಾಗೂ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳಿಗೆ ಸಂಸ್ಥೆಯ ವತಿಯಿಂದ ಉಚಿತವಾಗಿ ಮಾಸ್ಕ್ ಗಳನ್ನು ವಿತರಿಸಿ ಪರೀಕ್ಷೆಯನ್ನು ಸುರಕ್ಷಿತವಾಗಿ ಯಶಸ್ವಿಗೊಳಿಸುವ ಕಾರ್ಯದಲ್ಲಿ ಸಂಸ್ಥೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಮಸ್ಕಿಯ ವೈದ್ಯ ಡಾ. ಮಲ್ಲಿಕಾರ್ಜುನ ಇತ್ಲಿ ಅವರು ಅಭಿನಂದನ್ ಸಂಸ್ಥೆಯ ಸಾಮಾಜಿಕ ಸೇವೆಯ ಜೊತೆಗೆ ಈ ರೀತಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲೂ ಬಹಳ ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಹಾಗೂ ವಿದ್ಯಾರ್ಥಿಗಳ ಆತ್ಮಬಲವನ್ನು ವೃದ್ಧಿಸುವ ಕೆಲಸವನ್ನು ಕೈಗೊಂಡಿರುವುದು ವಿಷೇಶವಾಗಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

ಮುಖ್ಯ ಶಿಕ್ಷಕರಾದ ಬಸಪ್ಪ ತನಿಖೆದಾರ್, ಮಹಾಂತೇಶ್, ಮಹೇಶ್, ಮೋಹನ್ ಬಾವಿಮನಿ ಹಾಗೂ ಶಾಲಾ ಸಿಬ್ಬಂದಿಗಳು, ಸ್ಕೌಟ್ಸ್ ಆಂಡ್ ಗೈಡ್ಸ್, ಆಶಾ ಕಾರ್ಯಕರ್ತರು, ಪೋಲಿಸ್ ಸಿಬ್ಬಂದಿಗಳು ಮತ್ತು ಸಂಸ್ಥೆಯ ಸಂಸ್ಥಾಪಕರು ಹಾಗೂ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ ಸದಸ್ಯರಾದ ಶೃತಿ ಹಂಪರಗುಂದಿ, ಹನುಮಂತ, ಅಮೀತ್ ಕುಮಾರ ಪುಟ್ಟಿ, ಕಾರ್ತಿಕ್ ಜೋಗಿನ್, ರೇಣುಕಾ ಹಂಪರಗುಂದಿ, ಶುಭಕೋರಿದರು.

ಹಾಲಾಪೂರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ನಡೆದ ಪರೀಕ್ಷೆಯ ಸಂದರ್ಭದಲ್ಲಿ ಮೊದಲಿಗೆ ಗ್ರಾಮ ಪಂಚಾಯತಿ ಅದ್ಯಕ್ಷ ರವಿ ದೇಸಾಯಿ ಶಾಲೆಯ ದ್ವಾರ ಬಾಗಿಲನಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

ಪಿಡಿಒ ಮಲ್ಲಿಕಾರ್ಜುನ , ಎಸ್ ಡಿ ಎಮ್ ಸಿ ಅದ್ಯಕ್ಷ ವೀರಭದ್ರಪ್ಪ ತಾತ,  ಪರೀಕಾ ಅಧೀಕ್ಷರಾದ ಸುಭಾಷ್ ಸಿಂಗ್ , ಪ್ರಶ್ನೆ ಪತ್ರಿಕೆ ಸಂರಕ್ಷಕರಾದ ಶ್ರೀಶೈಲ ಉಮದಿ , ಮೊಬೈಲ್ ಸ್ವಾದಿನದಿಕಾರಿ ಪ್ರಶಾಂತಗೌಡ ,  ವೈದ್ಯರಾದ ಡಾ.ಶಿವಪ್ಪ , ಸಿದ್ದಾರ್ಥ ಪಾಟೀಲ್ ಹಾಗೆ ಅನೇಕ ಶಿಕ್ಷಕರು ಇದ್ದರು, ಒಟ್ಟು ಪರೀಕ್ಷೆಗೆ ನಿಗದಿಪಡಿಸಿದ ವಿದ್ಯಾರ್ಥಿಗಳ ಸಂಖ್ಯೆ 173 , ಗೈರು ಹಾಜರಿ 3 ,  ಪರೀಕ್ಷೆಗೆ ಹಾಜರಾದವರು 170 ಮಕ್ಕಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು