6:32 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಜನ್ಮದಿನಾಚರಣೆ: ಕಿರು‌ನಾಟಕ, ನೃತ್ಯ ಪ್ರದರ್ಶನ

24/07/2024, 23:08

ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪ್ರಥಮವಾಗಿ ಫಾ. ರಿಚರ್ಡ್ ಕಪುಚಿನ್ ಅವರಿಂದ ಬಲಿಪೂಜೆ ಅರ್ಪಿಸಲಾಯಿತು. ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ನಿರ್ಮಲಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂತ ಅನ್ನಾ ಅವರ ಬಗ್ಗೆ ಮಾತನಾಡಿ ಅವರ 5 ಗುಣಗಳಾದ ಮೌನತೆ, ಪ್ರಾರ್ಥನೆ, ದಾನ ಧರ್ಮ, ಸರಳತೆ, ಪ್ರೀತಿ, ಗೌರವ ನಮ್ಮ ಜೀವನದಲ್ಲಿ ಅಳವಡಿಸಬೇಕೆಂದರು.
ಸಂತ ಅನ್ನಾ ಅವರ ಈ 5 ಗುಣಗಳನ್ನು ಅಳವಡಿಸಿ ಕ್ವಿಜನ್ನು ಏರ್ಪಡಿಸಲಾಯಿತು. ಕ್ವಿಜಿನಲ್ಲಿ ವಿಜೇತರನ್ನು ಸಿ. ನಿರ್ಮಲಾ ಅವರು ಪ್ರಶಂಸಿದರು. ಕಾಲೇಜಿನ ಪ್ರಾಂಶುಪಾಲೆ ಸಿ. ವಿನೂತ ಅವರು ಸಂತ ಅನ್ನಾ ಅವರ ಬಗ್ಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾರ್ಮೆಲ್ ಮಾಜಿ ಶಿಕ್ಷಕಿ ಮಾರ್ಗರೇಟ್ ಮೊಂತೇರೊ, ಶಿಕ್ಷಕಿಯಾದ ಅಸುಂತಾ ಡಿಸೋಜ, ಶೇರಿನ್, ಪ್ರತಿಭಾ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂತ ಅನ್ನಾ ಅವರ ಜೀವನದ ಬಗ್ಗೆ ಕಿರು ನಾಟಕ, ನೃತ್ಯ ಹಾಗೂ ಇತರ ಕಾರ್ಯಕ್ರಮಗಳು ನಡೆಯಿತು. ಭಾರತಿ ಕಾರ್ಯಕ್ರಮ ನಿರ್ವಹಿಸಿದರು. ಸಾರಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು