11:58 PM Saturday6 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು, ಆಸ್ಪತ್ರೆಗೆ ದಾಖಲು

21/01/2025, 23:46

ಮಂಗಳೂರು(reporterkarnataka.com): ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ.

ತಮಿಳುನಾಡಿನ ತಿರುವೈಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರು ಪೊಲೀಸರು ಸ್ಥಳ ಮಹಜರಿಗೆ ಕರೆದು ತಂದಿದ್ದರು.
ಆರೋಪಿಗಳನ್ನು ಉಳ್ಳಾಲಕ್ಕೆ ಕರೆದೊಯ್ಯುತ್ತಿದ್ದ ವೇಳೆ ಕೆ.ಸಿ. ರೋಡ್ ಬಳಿ ಕಣ್ಣನ್ ಮಣಿ (35) ಎಂಬಾತನ ಪರಾರಿಯಾಗಲು ಯತ್ನಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿಯ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಪೊಲೀಸರು ಗಾಯಗೊಂಡಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿ.
ಸದ್ಯ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದಾನೆ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆ.ಸಿ. ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಅಲ್ಲಿ ಜೀಪಿನಿಂದ ಇಳಿಯುತ್ತಲೇ ಪೊಲೀಸರಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯ ಚೂರಿನಿಂದ ಹಲ್ಲೆಗೆ ಯತ್ನಿಸಿದ್ದು ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿ ಕಾಲಿಗೆ ಗುಂಡೇಟು ಹೊಡೆದಿದ್ದಾರೆ.
ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ಪೇದೆಗಳಾದ ಆಂಜಿನಪ್ಪ, ನಿತಿನ್ ಎಂಬವರಿಗೆ ಗಾಯಗಳಾಗಿವೆ. ಗಾಯಗೊಂಡ ಪೊಲೀಸರು ಮತ್ತು ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡೇಟು ಪ್ರಕರಣದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು