3:04 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಉಪ ಚುನಾವಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ಪೂರ್ವ ಸಿದ್ಧತಾ ಸಭೆ

14/09/2024, 23:24

ಮಂಗಳೂರು(reporterkarnataka.com):ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಉಪ ಚುನಾವಣೆಯ ಪೂರ್ವಭಾವಿ ಸಿದ್ದತೆ ಬಗ್ಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷದ ನಾಯಕರುಗಳ ಸಭೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರುಗಳಾದ ಜಿ. ಸಿ. ಚಂದ್ರಶೇಖರ್, ಮಂಜುನಾಥ ಭಂಡಾರಿ ಹಾಗೂ ವಸಂತ್ ಕುಮಾರ್ ಅವರ ನೇತೃತ್ವದಲ್ಲಿ ಉಭಯ ಜಿಲ್ಲೆಗಳ ಪ್ರಮುಖರ ಸಭೆ ಜರುಗಿತು.
ಪ್ರಮುಖವಾಗಿ ಸಭೆಯಲ್ಲಿ ಪಕ್ಷದ ಸಂಘಟನೆ,ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಉಪ ಚುನಾವಣೆಯ ಪೂರ್ವಭಾವಿಸಿದ್ದತೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿ, ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರುಗಳು,ಮುಂಚೂಣಿ ಘಟಕದ ಅಧ್ಯಕ್ಷರುಗಳು ಸೇರಿದಂತೆ 32 ನಾಯಕರುಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಸಂಘಟನೆ ಬಗ್ಗೆ, ಪಕ್ಷದಲ್ಲಿರುವ ನ್ಯೂನ್ಯತೆಗಳ ಬಗ್ಗೆ ಹಾಗು ಇತ್ತೀಚೆಗೆ ನಡೆಯುತ್ತಿರುವ ನೇಮಕಾತಿಗಳಲ್ಲಿ ಪಕ್ಷಕ್ಕೆ ದುಡಿದ ನಾಯಕರುಗಳಿಗೆ ಮಾನ್ಯತೆ ಕೊಡದೆ ಇಚ್ಚಾನುಸಾರವಾಗಿ ನೇಮಿಸುತ್ತಿದ್ದಾರೆ ಎಂದು ತಿಳಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಮುಳಗುಂದ್, ಬಿ ಬಾಲ್ ರಾಜ್, ಸತ್ಯನಾರಾಯಣ, ಎಂ.ಎಸ್. ಮೊಹಮ್ಮದ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು