2:15 PM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ, ಇಬ್ಬರು ಕೇಂದ್ರ ಸಚಿವರ ಅದೃಷ್ಟ ಪರೀಕ್ಷೆ

05/05/2024, 18:25

ಬೆಂಗಳೂರು(reporterkarnataka.com): ರಾಜ್ಯದ 2ನೇ ಹಾಗೂ ದೇಶದ 3ನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಈ ಚುನಾವಣೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಇಬ್ಬರು ಕೇಂದ್ರ ಸಚಿವರು ತಮ್ಮ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ.
ಮೇ 7ರಂದು ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಇಂದು ಸಂಜೆ 5.30ಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಇನ್ನು ಮನೆ ಮನೆ ಭೇಟಿಗೆ ಮಾತ್ರ ಅವಕಾಶವಿದೆ. ಹೊರ ಜಿಲ್ಲೆಗಳಿಂದ ಬಂದವರನ್ನು ತಕ್ಷಣ ತೆರಳಲು ಸೂಚಿಸಲಾಗಿದೆ.
ರಾಜ್ಯದ 2ನೇ ಹಂತದ ಮತದಾನ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರಾವಾಡ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಇಬ್ಬರು ಕೇಂದ್ರ ಸಚಿವರು ತಮ್ಮ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಬೆಳಗಾವಿ ಕ್ಷೇತ್ರದಿಂದ, ಇನ್ನೊರ್ವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇಬ್ಬರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಭಗವಂತ ಖೂಬಾ ಅವರು ಅನುಕ್ರಮವಾಗಿ ಧಾರಾವಾಡ ಹಾಗೂ ಬೀದರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಅಭ್ಯರ್ಥಿ ಯಾಗಿ ಸ್ಪರ್ಧಿ ಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು