ಇತ್ತೀಚಿನ ಸುದ್ದಿ
State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ
21/02/2025, 14:44

ಬೆಂಗಳೂರು(reporterkarnataka.com):ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಬಜೆಟ್ ಪೂರ್ವ ಸಭೆ ನಡೆಸಿ ಅವರ ಬೇಡಿಕೆ ಮತ್ತು ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಅರ್.ಪಾಟೀಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.