2:10 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

State Budget | ಬಿಜೆಪಿಯಿಂದ ಮಾರ್ಚ್ 7 ಬಜೆಟ್ ಮಂಡನೆ ದಿನ ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ, ಪ್ರತಿಭಟನೆ

02/03/2025, 22:23

ಬೆಂಗಳೂರು(reporterkarnataka.com): ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿಯಿಂದ ಮಾರ್ಚ್ 3ರಂದು ಪ್ರತಿಭಟಿಸಲಾಗುವುದು‌ ಎಂದು ತಿಳಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಈ ಮಾತನ್ನು ಹೇಳುತ್ತಿದ್ದಾರೆ. ಇದರ ಜೊತೆಗೆ ಹಣ ಇಲ್ಲದೆ ಒಂದು ಲಕ್ಷ ಕೋಟಿ ರೂ.ಸಾಲ ಮಾಡಲಾಗುತ್ತಿದೆ. ಜನರ ಮೇಲೆ ತೆರಿಗೆ ಹೊರೆ ಹೇರಲಾಗುತ್ತಿದೆ. ಇದನ್ನು ಖಂಡಿಸಿ ಮಾರ್ಚ್ 7 ರಂದು ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಾಗೂ ಪ್ರತಿಭಟನೆ ಮಾಡಲಾಗುವುದು ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯನವರ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ಬಳಸಿದೆ. ದಲಿತರ ಹಣವನ್ನು ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಮಾತ್ರ ಬಳಸಬೇಕು. ಚುನಾವಣೆ ಸಮಯದಲ್ಲಿ ಎಲ್ಲರಿಗೂ ಫ್ರೀ ಎಂದು ಹೇಳಿ, ಈಗ ದಲಿತರ ಹಣ ಬಳಸಲಾಗುತ್ತಿದೆ. ಬಿಜೆಪಿಯ 40% ಕಮಿಶನ್ ಹಣ ಉಳಿಸಿ ಗ್ಯಾರಂಟಿಗೆ ಬಳಸಲಾಗುವುದು ಎನ್ನಲಾಗಿತ್ತು. ಈಗ ಗುತ್ತಿಗೆದಾರರೇ ಕಾಂಗ್ರೆಸ್ ಸರ್ಕಾರದ ಕಮಿಶನ್ ಬಗ್ಗೆ ಹೇಳಿದ್ದಾರೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಗ್ಗಿ ಬಗ್ಗಿ ನಡೆಯಬೇಕೆಂದು ಹೇಳಿದ್ದರು. ಆ ಚಾಳಿಯನ್ನೇ ಮುಂದುವರಿಸಿ, ಸಿನಿಮಾ ಕಲಾವಿದರಿಗೆ ನೆಟ್ ಬೋಲ್ಟ್ ಟೈಟ್ ಮಾಡುತ್ತೇನೆ ಎಂದಿದ್ದಾರೆ. ಮೊದಲು ಸಚಿವ ರಾಜಣ್ಣ ಸೇರಿದಂತೆ ಇವರಿಗೆ ವಿರೋಧ ಮಾಡುತ್ತಿರುವವರಿಗೆ ನೆಟ್ ಬೋಲ್ಟ್ ಸರಿ ಮಾಡಲಿ. ಇವರು ಯಾವುದೇ ಕಲಾವಿದರನ್ನು ಆಹ್ವಾನಿಸಿಲ್ಲ. ಕಲಾವಿದರಿಗೆ ಧಮಕಿ ಹಾಕುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಕಲಾವಿದರು ಕಾಂಗ್ರೆಸ್ ಪಕ್ಷದ ಗುಲಾಮರಲ್ಲ. ಇವರ ಆಶೀರ್ವಾದ ಪಡೆದು ಸಿನಿಮಾಗಳು ಯಶಸ್ವಿಯಾಗುತ್ತಿಲ್ಲ ಎಂದರು.

ಧಮಕಿ ಹಾಕುವುದು, ಗೂಂಡಾಗಿರಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ. ಸಿನಿಮಾ ರಂಗಕ್ಕೆ ಬಿಜೆಪಿ ಸರ್ಕಾರ ಸಾಕಷ್ಟು ನೆರವು ನೀಡಿತ್ತು. ಇಂದು ಅಂಬರೀಶ್ ಅವರು ಇದ್ದಿದ್ದರೆ ಸರಿಯಾಗಿ ಉತ್ತರ ನೀಡುತ್ತಿದ್ದರು‌. ಸಿನಿಮಾ ರಂಗದವರು ಈ ಹೇಳಿಕೆಯನ್ನು ಖಂಡಿಸಬೇಕು. ಇದು ಕಲಾವಿದರಿಗೆ ಮಾಡುವ ಅಪಮಾನ. ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು‌.

ಪ್ರಧಾನಿ ನರೇಂದ್ರ ಮೋದಿಯವರು, ಶರದ್ ಪವಾರ್, ದೇವೇಗೌಡ ಸೇರಿದಂತೆ ಎಲ್ಲರಿಗೂ ಅಪಾರ ಗೌರವ ನೀಡುತ್ತಾರೆ‌. ಅವರು ಗೌರವ ನೀಡುವುದರಲ್ಲಿ ಮಾದರಿ‌. ಡಿ.ಕೆ.ಶಿವಕುಮಾರ್ ಅವರು ಧಮಕಿ ಹಾಕುವುದರಲ್ಲಿ ಮಾದರಿ‌ಯಾಗಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು