ಇತ್ತೀಚಿನ ಸುದ್ದಿ
State Budget | ರಾಜ್ಯ ಬಜೆಟ್ ಅಧಿವೇಶನ ಆರಂಭ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ
03/03/2025, 13:04

ಬೆಂಗಳೂರು(reportekarnataka.com): ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟೀ ಅಧಿವೇಶವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದರು.
ವಾಡಿಕೆಯಂತೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು. ಫೆ. 7ರಂದು ವಿತ್ತ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ನಂತರ ರಾಜ್ಯಪಾಲರ ಭಾಷಣದ ಕುರಿತು ಚರ್ಚೆ ನಡೆಯಲಿದೆ.