5:24 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ

15/03/2026, 22:45

ಬೆಂಗಳೂರು(reporterkarnataka.com):ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ.
ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು, ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಮಾರ್ಚ್ 16ರಿಂದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನ ಆಗಿರಲಿದೆ.

*ಉಪ ಚುನಾನವಣೆ ಏಕೆ?:*
ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು