6:29 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ…

ಇತ್ತೀಚಿನ ಸುದ್ದಿ

ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ

28/03/2025, 19:53

*ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ*

*ಏರಿಕೆ ಹಣ ರೈತರಿಗೋ? ಅಥವಾ ಕೆಎಂಎಫ್ ಗೋ ಎಂದು ಪ್ರಶ್ನೆ*

ನವದೆಹಲಿ(reporterkarnataka.com): ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’ ಎಂದು ಟಾಂಗ್ ನೀಡಿದ್ದಾರೆ.
ರಾಜ್ಯದಲ್ಲಿ ಹಾಲಿನ ಹಾಲಾಹಲ ಶುರುವಾಗಿದೆ. 3ನೇ ಸಲ ದರ ಏರಿಕೆ ಮಾಡಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ₹3, 2024 ಜೂನ್ ತಿಂಗಳಿನಲ್ಲಿ ₹2 ಹಾಗೂ 2025 ಮಾರ್ಚ್, ಅಂದರೆ ಈಗ ₹4 ಏರಿಕೆ ಮಾಡಲಾಗಿದೆ. ಹಾಗೆಯೇ ವಿದ್ಯುತ್ ಕೂಡ ದುಬಾರಿ ಆಗಿದೆ. ಜನರಿಗೆ ವಿದ್ಯುತ್ ಶಾಕ್ ನೀಡಿದ್ದಾರೆ. ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!! ಎಂದು ರಾಜ್ಯ ಸರ್ಕಾರದ ಬಗ್ಗೆ ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.
ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
*ಇದು ಪ್ರಜಾಪ್ರಭುತ್ವ ಸರಕಾರವಲ್ಲ:*
ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್!! ಎಂದು ಅವರು ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು