4:06 PM Sunday27 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

21/11/2025, 18:53

ಹಾವೇರಿ(reporterkarnataka.com): ಮೆಕ್ಕೆಜೋಳ ಖರೀದಿಸು ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಮೆಕ್ಕೆಜೋಳ ಖರೀದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ದೇಶಕ್ಕೆ ಎಷ್ಟು ಮೆಕ್ಕೆಜೋಳ ಬೇಕೊ ಅದರ ಆಧಾರದ ಮೇಲೆ ರಫ್ತಾಗುತ್ತದೆ. ಈ ವರ್ಷ ಕರ್ನಾಟಕದಲ್ಲಿ 17ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 54 ಲಕ್ಷ ಟನ್ ಬೆಳೆದಿದ್ದಾರೆ. ಈ ವರ್ಷ ಕನಿಷ್ಠ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಅದಕ್ಕಂತೂ ರಾಜ್ಯ ಸರ್ಕಾರ ಪರಿಹಾರ ಕೊಡುವುದಿಲ್ಲ. ಮುಖ್ಯಮಂತ್ರಿಗಳು ರೈತರ ವಿಚಾರದಲ್ಲಿ ಕೇವಲ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದಾರೆ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಇದ್ದಾಗ ರಾಜ್ಯ ಸರ್ಕಾರದಿಂದ ಖರೀದಿ ಮಾಡಿದ್ದರು. ಅವರು ಕೇಂದ್ರದ ಕಡೆಗೆ ಬೆರಳು ಮಾಡಿರಲಿಲ್ಲ. ಇದೇನು ಹಾಳಾಗುವ ಬೆಳೆ ಅಲ್ಲ. ಅದನ್ನು ಇಟ್ಟುಕೊಂಡು ಬೆಲೆ ಬಂದಾಗ ಮಾರಾಟ ಮಾಡಬಹುದು. ವ್ಯತ್ಯಾಸ ಬಂದರೆ ಕೇಂದ್ರ ಸರ್ಕಾರ ಕೊಡುತ್ತದೆ. ಆದ್ದರಿಂದ ರೈತರ ಬೇಡಿಕೆಯಂತೆ ಎಂಎಸ್‌ಪಿ 2400 ರೂ. ಇದೆ. ರೈತರ ಬಗ್ಗೆ ಕಳಕಳಿ, ಪ್ರೀತಿ ಇದ್ದರೆ ಇನ್ನೂ 600 ಸೇರಿಸಿ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಖರೀದಿಸಿಲಿ ಎಂದು ಒತ್ತಾಯಿದರು.
ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬಗ್ಗೆ ಮಾತ್ರ ಪ್ರಸ್ತಾಪ ಆಗಿರುವ ಕುರಿತು ಕೇಳಿದ ಪ್ರಶ್ನೆಗೆ ಇದು ರಾಜ್ಯ ಸರ್ಕಾರ ಅಲ್ಲಾ, ಪೋಸ್ಟ್ ಆಫೀಸ್ ಆಗಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು