7:53 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

07/03/2026, 23:17

ಬಂಟ್ವಾಳ(reporterkarnataka.com): ದ.ಕ.ಜಿಲ್ಲೆಯಲ್ಲಿ ನಡೆಯುವ ಕಂಬಳ ಜಾತ್ಯತೀತ, ಧರ್ಮಾತೀತವಾಗಿ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ನಮ್ಮ ಸರಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜತೆಗೆ ಹಣಕಾಸಿನ ನೆರವನ್ನೂ ಕೊಡ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಆರಂಭಗೊಂಡ 15ನೇ ವರ್ಷದ “ಮೂಡೂರು-ಪಡೂರು” ಜೋಡುಕರೆ ಬಯಲು ಕಂಬಳಕೂಟದಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜಕೀಯ ಪ್ರಜಾಪ್ರಭುತ್ವದ ಜತೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ದೊರಕಿದಾಗ ಮಾತ್ರ ಸ್ವಾತಂತ್ರ್ಯದ ಪರಿಕಲ್ಪನೆಬಯಶಸ್ಸು ಕಾಣುತ್ರದೆ ಈ ಹಿನ್ನಲೆಯಲ್ಲಿ ಸಮಾಜದ ದುರ್ಬಲ ವರ್ಗವನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದ್ದೆವೆ. ಮುಂದೆಯೇ ಮಾಡುತ್ತವೆ. ರಾಜ್ಯದ ಜನ ಕೈ ಹಿಡಿಯುತ್ತಾರೆಂಬ ವಿಶ್ವಾಸವಿದೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತವೆ ಎಂದರು.
ರಮಾನಾಥ ರೈಗಳ ಕ್ಷೇತ್ರಕ್ಕೆ ಐದು ಸಾವಿರ ಕೋಟಿ ರೂಪಾಯಿಯನ್ನು ಕಳೆದ ಅವಧಿಯಲ್ಲಿ ತರಿಸಿ ಅಭಿವೃದ್ಧಿ ಮಾಡಲಾಗಿತ್ತು. ಆದರೂ ಅವರನ್ನು ಕ್ಷೇತ್ರದ ಜನ ಸೋಲಿಸಿದರು. ಇದು ನೋವಿನ ಸಂಗತಿ, ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ. ಪ್ರಾಮಾಣಿಕ ಮಂತ್ರಿಗಳಲ್ಲಿ ರಮಾನಾಥ ರೈ ಕೂಡ ಒಬ್ಬರಾಗಿದ್ದರು. ಹೀಗಾಗಿ ಅವರು ಮತ್ತೆ ಗೆಲ್ಲಬೇಕು ಎಂದರು. ಮುಂದಿನ ಆರ್ಥಿಕ ವರ್ಷದಲ್ಲಿ‌ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದರು.

*ಸಿಎಂಗೆ ಕಂಬಳದ ಬೆತ್ತ:*
ಇದೇ ವೇಳೆ ಕಂಬಳ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳದ ಬೆತ್ತ,ಸ್ಮರಣಿಕೆಯನ್ನಿತ್ತು ಸನ್ಮಾನಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ ,ಮಾಜಿ ಸಚಿವ ಬಿ.ರಮಾನಾಥ ರೈ ಪ್ರಸ್ತಾವಿಕವಾಗಿ ಮಾತನಾಡಿ, 2013-18 ರ ಅವಧಿಯಲ್ಲಿ ಸಿದ್ದರಾಮಯ್ಯಾವರು ಮುಖ್ಯಮಂತ್ರಿಯಾಗಿದ್ದಾಗ ಬಂಟ್ವಾಳ ಕ್ಷೇತ್ರ ಸಹಿತ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ. ಪಶ್ಚಿಮ ವಾಹಿನಿ ಯೋಜನೆಯಡಿ ಕರಾವಳಿಯ ಮೂರು ಜಿಲ್ಲೆಗೆ 300 ಕೋ.ರೂ.ಅನುದಾನ ಮುಖ್ಯಮಂತ್ರಿಯವರು ಒದಗಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಕ್ರೀಡಾಂಗಣ ನಿರ್ಮಾಣವಾಗುವ ನಿಟ್ಟಿನಲ್ಲಿ ಮತ್ತೆ ಜೀವ ನೀಡಬೇಕು ಎಂದು ಮನವಿ ಮಾಡಿದರು.


ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ. ಸಂತೋಷ್ ಗುರೂಜಿ ಆಶೀರ್ವಚನಗೈದರು. ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ , ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಎಂ ಎಲ್ ಸಿ ಸಲೀಮ್ ಆಹ್ಮದ್, ಐವನ್ ಡಿಸೋಜ, ಶಾಸಕರುಗಳಾದ ಅಶೋಕ್ ಕುಮಾರ್ ರೈ , ಟಿ.ಡಿ.ರಾಜೇಗೌಡ , ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಸಾಮಾಜಿಕ ಕಾರ್ಯಕರ್ತ ಎಂ.ಜಿ.ಹೆಗಡೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್, ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಸಿಎಂ ಅವರ ಮಾಧ್ಯಮ ಸಲಹೆಗಾರ ಪ್ರಭಾಕರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಧನಭಾಗ್ಯ ಆರ್.,ಕೆಪಿಸಿಸಿ ಪ್ರ.ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪೂಜಾರಿ, ಕೃಪಾ ಆಳ್ವ ,ಬಂಟ್ವಾಳ ವಲಯದ ಧರ್ಮಗುರು ವಿಕ್ಟರ್ ಡಿಸೋಜ,ವಿಲ್ಪ್ರೆಡ್ ರೋಡ್ರಿಗಸ್ ಮೈಸೂರು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಚೆನ್ನವೇಣಿ ಶೆಟ್ಟಿ, ನ್ಯಾಯವಾದಿ ಅಶ್ವನಿಕುಮಾರ್ ರೈ, ದೀಪಕ್ ಕುಮಾರ್ ರೈ,ಉದ್ಯಮಿ ಉದಯ ಹೆಗ್ಡೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು