10:06 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ. 17ರಂದು ವಿಶೇಷ ಮೇಳ

13/08/2025, 19:03

ಬೆಂಗಳೂರು(reporterkarnataka.com): ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ.
ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮ ವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ.
ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ.
ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ.
ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಹೆಚ್ಚಿನ ಮಾಹಿತಿ ನೀಡಿದರು.
ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶವನ್ನು ಒದಗಿಸಲಾಗುವುದು. ಇದೇ ಮೊದಲ ಬಾರಿಗೆ ಈ ರೀತಿಯ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದು ಜಾಗತಿಕ ಶಿಕ್ಷಣದ ಹೆಬ್ಬಾಗಿಲು ಎಂದು ಸಚಿವರು ತಿಳಿಸಿದರು.
ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ಭಾರತದಿಂದ ತೆರಳಿದ ನಂತರ ಅವರಿಗೆ ಎಲ್ಲ ರೀತಿಯ ಬೆಂಬಲ ಒದಗಿಸುವುದು ನಮ್ಮ ಗುರಿಯಾಗಿದೆ. ಈ ಸರ್ಕಾರಿ ಬೆಂಬಲಿತ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹೆಚ್ಚು ಆಪ್ತವಾಗಿರಲಿದೆ. ಶೈಕ್ಷಣಿಕ ಪ್ರಗತಿ ಮತ್ತು ಕಾನೂನು ನೆರವು ಎಲ್ಲವೂ ದೊರೆಯಲಿದೆ ಎಂದು ಸಚಿವರು ವಿವರಿಸಿದರು.
ಈ ಎಕ್ಸ್‌ಪೋದಲ್ಲಿ ಹೆಚ್ಚು ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆ ನೀಡುತ್ತದೆ. ವಿಶ್ವವಿದ್ಯಾಲಯದ ಆಯ್ಕೆ, ಏಜೆನ್ಸಿ ಶುಲ್ಕವಿಲ್ಲದೆ ಉಚಿತ ಮಾರ್ಗದರ್ಶನವನ್ನು ನಾವು ನೀಡುತ್ತೇವೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು