7:10 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಫೆಬ್ರವರಿಯಲ್ಲಿ ರಾಜ್ಯಮಟ್ಟದ ಗೇರು ಮೇಳ

09/01/2026, 21:41

ಮಂಗಳೂರು(reporterkarnataka.com): ಮುಂಬರುವ ಫೆಬ್ರವರಿ ತಿಂಗಳಲ್ಲಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ಅವರು ಶುಕ್ರವಾರ ನಗರದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಕಚೇರಿಗೆ ಭೇಟಿ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಅತ್ಯಧಿಕ ಗೇರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ. ಇಲ್ಲಿ ಗೇರು ಸಸಿಗಳಿಗೆ ಹೆಚ್ಚು ಬೇಡಿಕೆ ಇರುವ ಬಗ್ಗೆ ತಿಳಿದು ಬಂದಿದೆ. ಗೇರು ಉತ್ಪನ್ನಗಳಿಗೆ ದೇಶದಲ್ಲಿಯೂ ಹಾಗೂ ವಿದೇಶದಲ್ಲಿಯೂ ಹೆಚ್ಚಿನ ಬೇಡಿಕೆ ಇದೆ. ಬೇಡಿಕೆಯಷ್ಟು ಗೇರು ಪೂರೈಕೆ ಇಲ್ಲದೆ ವಿದೇಶದಿಂದ ಗೇರು ಆಮಧು ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಅವರು ಹೇಳಿದರು.
ಕರಾವಳಿ ಗೇರು ಬೆಳೆಗಾರರನ್ನು ಪ್ರೋತ್ಸಾಹಿಸಲು ಮಂಗಳೂರಿನಲ್ಲಿ ಗೇರು ಮೇಳವನ್ನು ಆಯೋಜಿಸಲಾಗುತ್ತಿದೆ. ಇದರಿಂದ ಗೇರು ಬೆಳೆಗಾರರು, ಗೇರು ಉದ್ಯಮದವರನ್ನು ಒಂದೆಡೆ ಸೇರಿಸಿ ಗೇರು ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಿಸಲು ಪ್ರಯತ್ನಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಗೇರು ಮೇಳದಲ್ಲಿ ಉತ್ಪನ್ನಗಳ ಪ್ರದರ್ಶನ, ವಿಚಾರ ಸಂಕಿರಣ ಸೇರಿದಂತೆ ವಿವಿಧ ಆಯಾಮಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ಹೇಳಿದರು.
ಗೇರು ಬೆಳೆಗಾರರಿಗೆ ವೈಜ್ಞಾನಿಕ ಬೆಲೆ ದೊರಕುವಂತಾಗಲು ಇಲಾಖೆಯು ಕ್ರಮ ಕೈಗೊಳ್ಳಲಿದೆ. ಉತ್ಪಾದನೆಯನ್ನು ಇನ್ನಷ್ಟು ಹೆಚ್ಚಿಸಲು ಬೇಕಾದ ಎಲ್ಲಾ ರೀತಿಯ ಸಂಶೋಧನೆ, ಬೆಲೆ ವಿಸ್ತರಣೆ ಮತ್ತಿತರ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವರು ತಿಳಿಸಿದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಮಾತನಾಡಿ, ಜಿಲ್ಲೆಯಲ್ಲಿ 40 ಸಾವಿರ ಮೆಟ್ರಿಕ್ ಟನ್ ಗೇರು ಉತ್ಪಾದನೆಯಾಗುತ್ತಿದೆ. ಜಿಲ್ಲೆಯಲ್ಲಿ ಗೇರು ಉತ್ಪನ್ನಗಳಿಗೆ ಹೆಚ್ಚು ಬೇಡಿಕೆ ಇದ್ದು, ಗೇರು ಉದ್ಯಮದಿಂದಲೂ ಬೇಡಿಕೆ ಬರುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗೇರು ಸಸಿಗಳಿಗೂ ಹೆಚ್ಚಿನ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ನಿಗಮವು ಇದಕ್ಕೆ ಬೇಕಾದ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ಮೇಗಿ, ಸಿಸಿಎಫ್ ಕರಿಕಲನ್, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಮಾಜಿ ಸಚಿವ ರಮಾನಾಥ ರೈ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು