12:11 PM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಹಾಸನದಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟ: ಬ್ಯಾಟಿಂಗ್ ಮೂಲಕ ಸಂಸದ ಶ್ರೇಯಸ್ ಪಟೇಲ್ ಚಾಲನೆ

12/04/2025, 20:54

ಹಾಸನ(reporterkarnataka.com): ಹಾಸನದಲ್ಲಿ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಎರಡು ದಿನದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಸಂಸದ ಶ್ರೇಯಸ್ ಪಟೇಲ್ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸದಾ ಒತ್ತಡದಲ್ಲಿರುವ ಪತ್ರಕರ್ತರು ಒಂದೆಡೆ ಸೇರಿ ಕ್ರಿಕೆಟ್ ಆಡುವ ಮೂಲಕ ಒತ್ತಡ ನೀಗಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕ್ರೀಡೆಯಲ್ಲಿ ಮಾತ್ರ ಯಾವುದೇ ಬೇದಭಾವ ಕಾಣಲು ಸಾಧ್ಯವಿಲ್ಲ. ಆದ್ದರಿಂದಲೇ ಕ್ರೀಡಾ ಮನೋಭಾವ ಗಳಿಸಿಕೊಳ್ಳುವ ಮೂಲಕ ಸೋಲು ಗೆಲುವು ಸಮಾನವಾಗಿ ಸ್ವೀಕಾರ ಮಾಡಬೇಕು ಎಂದು ಕರೆ ನೀಡಿದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪ್ರತಿ ವರ್ಷವೂ ಪತ್ರಕರ್ತರಿಗಾಗಿಯೇ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿ 24 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ವಿಶೇಷ ಎಂದರು.
ರಾಜ್ಯ ಸಮಿತಿ ಸದಸ್ಯ ಎಚ್.ಬಿ.ಮದನಗೌಡ, ಕೆಯುಡಬ್ಲ್ಯೂಜೆ
ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷರಾದ ಅಜ್ಜಮಾಡ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಪುಂಡಲೀಕ ಬಾಳೋಜಿ, ಖಜಾಂಚಿ ವಾಸುದೇವ ಹೊಳ್ಳ, ಕಾರ್ಯದರ್ಶಿಗಳಾದ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಜಿಲ್ಲಾ ಸಂಘದ ಅಧ್ಯಕ್ಷ ವೇಣುಕುಮಾರ್ , ಸಣ್ಣಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಜೆ.ಆರ್.ಕೆಂಚೇಗೌಡ, ಎನ್.ರವಿಕುಮಾರ್ ಪದಾಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು