8:06 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜನವರಿ 5-7: ಮಂಗಳೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 500 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ

07/11/2023, 18:50

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜನವರಿ 5, 6 ಮತ್ತು 7ರಂದು ನಗರದಲ್ಲಿ
ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು
ನಡೆಸುವ ಬಗ್ಗೆ ರಾಜ್ಯ ಸಮಿತಿ ತೀರ್ಮಾನಿಸಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಪತ್ರಿಕಾ ಭವನದಲ್ಲಿ ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರ ಅಧ್ಯಕ್ಷತೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿಯ ಸೌಹಾರ್ದ ಪರಂಪರೆಯ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆಯನ್ನು ರಾಜ್ಯಾದ್ಯಂತ ವಿಸ್ತರಣೆಗೆ ಈ ಪಂದ್ಯಾವಳಿ ಪೂರಕವಾಗಲಿದೆ ಎಂದರು.
ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜ ಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಈ ಕ್ರೀಡಾಕೂಟದಲ್ಲಿ 25 ಜಿಲ್ಲೆಯಲ್ಲಿ 500 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಕ್ರಿಕೆಟ್ ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಸಂಚಾಲಕರಾದ ರವೀಂದ್ರ ಶೆಟ್ಟಿ, ಪುಷ್ಪ ರಾಜ್ ಬಿ.ಎನ್., ಭಾಸ್ಕರ್ ರೈ ಕಟ್ಟ, ರಾಜೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು