ಇತ್ತೀಚಿನ ಸುದ್ದಿ
ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಮೊದಲ ಬಹುಮಾನ ಪಡೆದ ಉದಯ ವಾಣಿಯ ಸತೀಶ್ ಇರಾಗೆ ಪುರಸ್ಕಾರ ಪ್ರದಾನ
23/03/2025, 21:44

ಹುಬ್ಬಳ್ಳಿ(reporterkarnataka.com): ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಇದೇ ಮೊದಲ ಬಾರಿಗೆ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಉದಯವಾಣಿ ಮಂಗಳೂರು ವಿಭಾಗದ ಹಿರಿಯ ಛಾಯಾಗ್ರಾಹಕ ಸತೀಶ್ ಇರಾ ಅವರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪುರಸ್ಕಾರ
ಪ್ರದಾನ ಮಾಡಿದರು.
ಹುಬ್ಬಳ್ಳಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್, ಶಾಸಕ ಮಹೇಶ್ ಟೆಂಗಿನಕಾಯಿ ಮುಂತಾದವರು ಉಪಸ್ಥಿತರಿದ್ದರು.