9:42 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

19ನೇ ರಾಜ್ಯ ಮಟ್ಟದ ಅಂತರ್‌ ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ; ರೋಟರ‌್ಯಾಕ್ಟ್ ಕ್ಲಬ್ ಮಂಗಳೂರು ಸಿಟಿಗೆ ಪ್ರಶಸ್ತಿ

14/06/2025, 08:11

ಮಂಗಳೂರು (reporterkarnataka.com)
ಜಿಲ್ಲಾ ರೋಟರಾಕ್ಟ್ ಸಂಸ್ಥೆಯ ಮತ್ತು ರೋಟರಾಕ್ಟ್ ಮಂಗಳೂರು ಸಿಟಿ‌ ಸಂಸ್ಥೆಯ ಜಂಟಿ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ| ರೋ. ಶಾಂತಾರಾಮ್ ವಾಮಂಜೂರು ಸ್ಮಾರಕ 19ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್‌ ಕ್ಲಬ್ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ಸಂಸ್ಥೆಯ ಸಭಾಪತಿ ರೋ। ಡಾ| ದೇವದಾಸ್ ರೈ ನೇತೃತ್ವದಲ್ಲಿ ಇತ್ತೀಚೆಗೆ ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಜರಗಿತು.

ರೋಟರಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯನ್ನು ಪ್ರತಿನಿಧಿಸಿದ ರೋ। ಸಾತ್ವಿಕ್ ಕೊಟೆಕಾರ್ ಮತ್ತು ರೋ ಶಮನ್ ಜೋಡಿ ಪ್ರಥಮ ಸ್ಥಾನ ಗಳಿಸಿತು. ರೋಟರಾಕ್ಟ್ ಕ್ಲಬ್ ನವಚೈತನ್ಯ. ಬೆಂಗಳೂರು ಸಂಸ್ಥೆಯನ್ನು ಪ್ರತಿನಿಧಿಸಿದ ರೋ। ಶ್ರೀಖರ್ ದ್ವಿತೀಯ ಸ್ಥಾನ ಪಡೆದರು.

ಖ್ಯಾತ ತುಳು ಚಲನಚಿತ್ರ ನಟ ಬೋಜರಾಜ ವಾಮಂಜೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತಮ್ಮ ದಿವಂಗತ ಸಹೋದರ ರೋ। ಶಾಂತಾರಾಮ್ ವಾಮಂಜೂರು ಸ್ಮರಣಾರ್ಥ ವರ್ಷಂಪ್ರತಿ ಈ ಸ್ಪರ್ಧಾಕೂಟವನ್ನು ಆಯೋಜಿಸುವ ರೋಟರಾಕ್ಟ್ ಸಂಸ್ಥೆಯ ನಿಸ್ವಾರ್ಥ ಸಮಾಜಸೇವಾ ಕಾರ್ಯ ಶ್ಲಾಘನೀಯ ಎಂದು ನುಡಿದು ರೋಟರಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಅಂತರಾಷ್ಟ್ರೀಯ ರೋಟರಾಕ್ಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಗುಂಟೂರು ನಗರ ಮೂಲದ ರೋ। ರವಿ ವಡ್ಡಮಣಿಯವರು ಗೌರವ ಅತಿಥಿಯಾಗಿ ಪಾಲ್ಗೊಂಡು, ರೋಟರಾಕ್ಟ್ ಸಂಸ್ಥೆಯ ಯುವ ಸದಸ್ಯರು ಸಂಸ್ಥೆಯ ಧೈಯ, ನೀತಿ, ಮಾಹಿತಿ, ಉದ್ದೇಶಗಳ ಜ್ಞಾನವನ್ನು ವೃದ್ಧಿಸಬೇಕು ಮತ್ತು ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿ ಸ್ಪರ್ಧಾ ವಿಜೇತರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ರೋಟರಾಕ್ಟ್ ಜಿಲ್ಲಾ ಚುನಾಯಿತ ಪ್ರತಿನಿಧಿ ಮೈಸೂರು ನಗರ ಮೂಲದ ರೋ। ಪ್ರಜ್ವಲ್, ರೋಟರಾಕ್ಟ್ ದಕ್ಷಿಣ ಏಷ್ಯಾದ ಸಂಸ್ಥೆಯ ಅಧ್ಯಕ್ಷ ಡೇರಿಲ್ ಡಿ’ಸೋಜಾ, ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಚುನಾಯಿತ ಅಧ್ಯಕ್ಷರಾದ ರೋ। ಭಾಸ್ಕರ್ ರೈ, ಶ್ರೀಮತಿ ವಾಣಿ ವಾಮಂಜೂರ್ ಉಪಸ್ಥಿತರಿದ್ದರು. ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷರಾದ ರೋ। ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು.

ಮೈಸೂರು, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯ 10 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಪ್ರವೇಶ ಪಡೆದಿದ್ದವು. ಈ ಸ್ಪರ್ಧಾಕೂಟವನ್ನು ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿಯವರಾದ ರೋ। ಡಾ। ದೇವದಾಸ್ ರೈ ನಿರೂಪಿಸಿದ್ದರು. ಕಾರ್ಯದರ್ಶಿ ರೋ। ಅಕ್ಷಯ್ ರೈ ವಂದಿಸಿದರು.

ರೋ। ದಿ। ಶಾಂತಾರಾಮ್ ವಾಮಂಜೂರ್‌ರವರು ಸಂಸ್ಥೆಯ ನಿಷ್ಠಾವಂತ ಸದಸ್ಯರಾಗಿದ್ದು, ನಿಸ್ವಾರ್ಥ ಸೇವಾ ಮನೋಭಾವ ಹೊಂದಿದ್ದು, 2006 ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆಕಸ್ಮಿಕ ವಾಹನ ರಸ್ತೆ ಅಪಘಾತದ ದುರಂತದಲ್ಲಿ ವಿಧಿವಶರಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ವಾರ್ಷಿಕ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟವನ್ನು ಆಯೋಜಿಸಲಾಗುವುದು ಎಂದು ಡಾ| ದೇವದಾಸ್ ರೈಯವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು